ಉಡುಪಿ/ಮಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಡಿ. 3 ರಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ (1-12ನೇ ತರಗತಿವರೆಗೆ) ರಜೆ ಘೋಷಿಸಲಾಗಿದೆ.
ಇನ್ನುಳಿದಂತೆ ಕೊಡಗು ಜಿಲ್ಲೆಯಲ್ಲೂ ರಜೆ ಘೋಷಿಸಲಾಗಿದೆ.
ಕರಾವಳಿಯ ಅರಬ್ಬಿಸಮುದ್ರ ಪ್ರಕ್ಷುಬ್ಧವಾಗಿದ್ದು ಮೀನುಗಾರರಿಗೆ ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸಲು ಸೂಚಿಸಿದೆ. ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸಲು ಸೂಚಿಸಿದೆ.
ತುರ್ತು ಸೇವೆಗೆ 24×7 ಕಂಟ್ರೋಲ್ ರೂಂ 1077/ 0824-2442590, ಮಂಗಳೂರು- 0824-2220587, ಉಳ್ಳಾಲ – 0824-2204424, ಬಂಟ್ವಾಳ ತಾಲೂಕು – 08255 -232500, ಪುತ್ತೂರು ತಾಲೂಕು – 08251-230349, ಬೆಳ್ತಂಗಡಿ ತಾಲೂಕು-08256-232047, ಕಡಬ- 08251-260435, ಸುಳ್ಯ ತಾಲೂಕು – 08257-231231, ಮೂಡಬಿದ್ರೆ ತಾಲೂಕು – 08258-238100, ಮುಲ್ಕಿ ತಾಲೂಕು – 0824-2294496 ಸಂಪರ್ಕಿಸಲು ಸೂಚನೆ ನೀಡಿದ್ದು, ಜಿಲ್ಲೆಯ ಜನತೆ ಎಚ್ಚರಿಕೆ ವಹಿಸಬೇಕಾಗಿದೆ. ಜಿಲ್ಲಾಧ್ಯಂತ ಭಾರಿ ಮಳೆ ಆಗುವ ಸಂಭವವಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈಗಾಗಲೇ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.