
ಬೆಂಗಳೂರು, ಡಿ.05: ನಾಳೆ ಡಿ 06ರಂದು ಸಂವಿಧಾನಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನವಾಗಿದ್ದು, ಈ ದಿನವನ್ನು ರಾಜ್ಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಆಚರಿಸುವಂತೆ ಸೂಚಿಸಲಾಗಿದೆ.
ಈ ಕುರಿತು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು,ನಾಳೆ ಬೆಳಿಗ್ಗೆ 10 ಗಂಟೆಗೆ ಎಲ್ಲಾ ಕಚೇರಿಗಳಲ್ಲಿ ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಮತ್ತು ಪುಷ್ಪಾರ್ಚನೆ ಮಾಡಿ, ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನ ವನ್ನು ಕಡ್ಡಾಯವಾಗಿ ಆಚರಿಸುವಂತೆ ಸರ್ಕಾರ ಸೂಚಿಸಿದೆ
.
.
