ಅಜೆಕಾರು : ಅಜೆಕಾರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆಯು ನಾಳೆ (ಜು.14) ಅಜೆಕಾರು ಮುಖ್ಯರಸ್ತೆಯಲ್ಲಿರುವ ಶಾಲೋಮ್ ಪ್ರಗತಿ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊಳ್ಳಲಿದೆ.
ನಾಳೆ ಬೆಳಿಗ್ಗೆ 9 ಗಂಟೆಗೆ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ ನೂತನ ಶಾಖೆಯನ್ನು ಉದ್ಘಾಟಿಸಲಿದ್ದು, ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶಿವರಾಮ ಜಿ ಶೆಟ್ಟಿ ದೀಪ ಪ್ರಜ್ವಲನೆ ಮಾಡಲಿರುವರು.
ಕುಕ್ಕುಂದೂರು ಗಣಿತನಗರ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಭದ್ರತಾ ಕೋಶದ ಉದ್ಘಾಟನೆ ನೆರವೇರಿಸಲಿದ್ದು, ಸೊಸೈಟಿಯ ಅಧ್ಯಕ್ಷರಾದ ಸುಜಯ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಎಣ್ಣೆಹೊಳೆ ಅರುಣ್ ಭಟ್, ಅಜೆಕಾರು ಚರ್ಚ್ನ ಧರ್ಮಗುರುಗಳಾದ ರೆ| ಫಾ| ಪ್ರವೀಣ್ ಅಮೃತ್ ಮಾರ್ಟಿಸ್ , ಅಜೆಕಾರು ಮಸೀದಿಯ ಖತಿಬ್ ಉಮರ್ ಫಾರುಕ್ ಜವಹಾರಿ, ಕಾರ್ಕಳ ನಿಟ್ಟೆ ಗಾಜ್ರಿಯಾ ಸ್ಪೆಷಾಲಿಟಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸುಧಾಕರ ಅಂಚನ್, ಮರ್ಣೆ ಪಂಚಾಯತ್ ಅಧ್ಯಕ್ಷೆ ಪ್ರಭಾವತಿ ನಾಯಕ್, ಅಜೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅನುಷಾ ಶೆಟ್ಟಿ, ಅಜೆಕಾರು ಸಾರ್ವಜನಿಕ ಶಾರದಾ ಮಹೋತ್ಸವ ಸಮಿತಿ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಅಜೆಕಾರು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ವಿಜಯ ಶೆಟ್ಟಿ ಭಾಗವಹಿಸಲಿರುವರು.
ಇದೇ ಸಂದರ್ಭದಲ್ಲಿ ನಿಟ್ಟೆ ಗಾಜ್ರಿಯಾ ಸ್ಪೆಷಾಲಿಟಿ ಹಾಸ್ಪಿಟಲ್ ಕಾರ್ಕಳ ಇವರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಂಸ್ಥೆ ತಿಳಿಸಿದೆ














