ಕಾರ್ಕಳ,ಸೆ,11: ಕಾರ್ಕಳ ತಾಲೂಕಿನ ನೀರೆ ಗ್ರಾಮ ಪಂಚಾಯಿತಿಯ ನೂತನ ಕಚೇರಿ ಕಟ್ಟಡ, ಸಭಾಭವನ , ಸಂಜೀವಿನಿ ಸಭಾಭವನ ಹಾಗೂ ಗ್ರಾಮ ಆಡಳಿತ ಅಧಿಕಾರಿಯವರ ಕಚೇರಿ ಇದರ ಉದ್ಘಾಟನಾ ಸಮಾರಂಭವು ನಾಳೆ (ಸೆ.12 ರಂದು ಶುಕ್ರವಾರ) ಬೆಳಗ್ಗೆ 9.30ಕ್ಕೆ ನಡೆಯಲಿದೆ.
ಈ ನೂತನ ಕಟ್ಟಡವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್, ಮಾಹಿತಿ ಮತ್ತು ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಂದಾಯ ಸಚಿವ ಕೃಷ್ಣ ಭೈರೇಗೌಡ ವಿಶೇಷ ಅತಿಥಿಯಾಗಿ ಉಪಸ್ಥಿತರಿರಲಿದ್ದಾರೆ.
ಕಾರ್ಕಳ ಶಾಸಕ ಸುನಿಲ್ ಕುಮಾರ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್ ಭೋಜೇಗೌಡ, ಮಂಜುನಾಥ ಭಂಡಾರಿ, ಡಾ.ಧನಂಜಯ ಸರ್ಜಿ,ಕಿಶೋರ್ ಕುಮಾರ್ ಪುತ್ತೂರು, ನೀರೆ ಗ್ರಾಂ ಪಂಚಾಯತ್ ಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ಎಸ್.ಪ್ರಭು, ಕಾರ್ಕಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ, ರಾಜ್ಯ ಸರ್ಕಾರದ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಉಡುಪಿ ಜಿಲ್ಲಾಧಿಕಾರಿ ಸ್ವರೂಪ.ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಓ ಪ್ರತೀಕ್ ಬಾಯಲ್, ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಉಡುಪಿ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಹಾಗೂ ಕಾರ್ಕಳ ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಸುಬ್ರಹ್ಮಣ್ಯ ಶೆಟ್ಟಿ, ಕಾರ್ಕಳ ತಹಸೀಲ್ದಾರ್ ಪ್ರದೀಪ್,ಆರ್, ಕಾರ್ಕಳ ತಾಲೂಕು ಪಂಚಾಯತ್ ಇಒ ಪ್ರಶಾಂತ್ ರಾವ್ ಉಪಸ್ಥಿತರಿರಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಉದಯ ಶೆಟ್ಟಿ ಮುನಿಯಾಲು, ಮಂಗಳೂರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಗೋಕುಲ್ ದಾಸ್ ನಾಯಕ್, ಬೋಳಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್ ಕಾರ್ಕಳ ಇದರ ಆಡಳಿತ ನಿರ್ದೇಶಕ ಬೋಳ ದಾಮೋದರ್ ಕಾಮತ್, MRPL ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ ಮಿಯ್ಯಾರು, ಅಡಪಾಡಿ ಉಮಾಮಹೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ಧರ್ಮದರ್ಶಿ, ಪುಂಡಲೀಕ ನಾಯಕ, ಇಂಡಿಯಾ ನೌ ಫೌಂಡೇಶನ್ ನ ಶಾಂತರಾಮ ಭಂಡಾರ್ಕರ್ ಮಹಾರಾಜ್, ರಾಜಪುರ ಸಾರಸ್ವತ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಅಧ್ಯಕ್ಷ ರವೀಂದ್ರ ಪ್ರಭು ಕಡಾರಿ, ಬ್ರಹ್ಮಲಿಂಗೇಶ್ವರ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕಣಂಜಾರು ವಿಕ್ರಮ್ ಹೆಗ್ಡೆ, ಗೀತಾಂಜಲಿ ಸಿಲ್ಕ್ಸ್ ಹಾಗೂ ಹೋಟೆಲ್ ಶಾಂತಿ ಸಾಗರ್ ಮಾಲಕ ಸಂತೋಷ್ ವಾಗ್ಲೆ, ನೀರೆ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನೀರೆ ಕೃಷ್ಣಶೆಟ್ಟಿ, ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ನೀರೆ ರವೀಂದ್ರ ನಾಯಕ್, ಪಂಚ ಯಕ್ಷಗಾನ ಮೇಳದ ಮಾಲಕ ಪಿ ಕಿಶನ್ ಹೆಗ್ಡೆ, ಆರೂರು ನರ್ಸಿಂಗ್ ಹೋಮ್ ವೈದ್ಯಾಧಿಕಾರಿ ಡಾ. ಎಂಬಿ ಆಚಾರ್, ಉದ್ಯಮಿ ಚಂದ್ರಶೇಖರ್ ಮಾಡ, ಸಿಎ ಚಂದನ್ ಕುಮಾರ್ ಹೆಗಡೆ,ಕಣಂಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಸುಧೀರ್ ಹೆಗ್ಡೆ, ಕಣಂಜಾರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ರಮೇಶ್ ನಾಯಕ್, ಕಣಂಜಾರು ಲೂರ್ಡ್ಸ್ ಚರ್ಚ್ ಧರ್ಮಗುರು ಹೇರಾಲ್ಡ್ ಫಿರೇರಾ, ನೀರೆ ಬೈಲೂರು ತ್ವಾಹಾ ಜುಮಾ ಮಸೀದಿಯ ಖತೀಬ ಮೊಹಮ್ಮದ್ ನಿಜಾಮುದ್ದೀನ್ ಬಾಖವಿ, ವಿಜಯ ಬ್ಯಾಂಕ್ ನಿವೃತ್ತ ಉಪ ಮುಖ್ಯ ಪ್ರಬಂಧಕ ದಿನೇಶ್ ಚಂದ್ರ ಹೆಗ್ಡೆ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಮಾಲಿನಿ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸುಮಿತ್ ಶೆಟ್ಟಿ, ಉದ್ಯಮಿ ಸುಧೀರ್ ಹೆಗ್ಡೆ , ಬೈಲೂರು ಮೈತ್ರಿ ಸೇವಾ ಸಂಘದ ಅಧ್ಯಕ್ಷ ಹರಿಶ್ಚಂದ್ರ ಶೆಟ್ಟಿ, ನೀರೆಬೈಲೂರು ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಉದ್ಯಮಿ ರಾಮಕೃಷ್ಣ ಶೆಟ್ಟಿ, ನೀರೆಬೈಲೂರು ಗಣೇಶೋತ್ಸವ ಸಮಿತಿ ಅಧ್ಯಕ್ಷ ದಿಲೀಪ್ ಸಂಜೀವ ಶೆಟ್ಟಿ, ನ್ಯಾಯವಾದಿ ಸದಾನಂದ ಸಾಲಿಯಾನ್, ಕಾರ್ಕಳ ತಾಲೂಕು ಸಂಜೀವಿನಿ ಯೋಜನೆಯ ತಾಲೂಕು ವ್ಯವಸ್ಥಾಪಕಿ ಉಮಾ ಫ್ರಾನ್ಸಿಸ್ ಉಪಸ್ಥಿತರಿರಲಿದ್ದಾರೆ ಎಂದು ನೀರೆ ಬೈಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ಎಸ್ ಪ್ರಭು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಂಕಿತಾ ನಾಯಕ್ ತಿಳಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ಬೈಲೂರು ವಲಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬನಶಂಕರಿ ಸಂಜೀವಿನಿ ಒಕ್ಕೂಟ ನೀರೆ, ಕಣಂಜಾರು ಸಾರ್ವಜನಿಕ ಗಣೇಶೋತ್ಸವ ಸಮಿತಿ ನೀರೆಬೈಲೂರು, ಮೈತ್ರಿ ಸೇವಾ ಸಂಘ ನೀರೆಬೈಲೂರು, ಲಯನ್ಸ್ ಕ್ಲಬ್ ನೀರೆಬೈಲೂರು, ಕರಕರಿ ಫ್ರೆಂಡ್ಸ್ ಸೇವಾಬಳಗ ಬೈಲೂರು, ಯುವಸಂಗಮ ಕೌಡೂರು, ವೀರಮಾರುತಿ ಭಜನಾ ಮಂಡಳಿ ನೀರೆ, ನಮ್ಮ ಜವಣೆರ್ ಸೇವಾ ಬಳಗ ಕಣಂಜಾರು, ಗೋಪಾಲಕೃಷ್ಣ ಭಜನಾ ಮಂಡಳಿ, ಜಡ್ಡಿನಂಗಡಿ ನೀರೆ, ಬ್ರಹ್ಮಲಿಂಗೇಶ್ವರ ಫ್ರೆಂಡ್ಸ್ ಕಣಂಜಾರು, ಹಡಂಕೋಳಿ ಫ್ರೆಂಡ್ಸ್ ಕಣಂಜಾರು, ಮೇಲ್ಬಂಟ ಫ್ರೆಂಡ್ಸ್ ಕಣಂಜಾರು, ಕೆರೆಪಲ್ಕೆ ಫ್ರೆಂಡ್ಸ್ ನೀರೆ, ಉಮಾಮಹೇಶ್ವರ ಭಜನಾ ಮಂಡಳಿ ಪೆಲತೂರು, ಟೀಮ್ ಸಹಸ್ರ ನೀರೆಬೈಲೂರು, ಪೆಲತ್ತೂರು ಫ್ರೆಂಡ್ಸ್ ಕಣಂಜಾರು ಈ ಕಾರ್ಯಕ್ರಮಕ್ಕೆ ಪ್ರಮುಖ ಸಹಕಾರ ನೀಡಲಿವೆ.
ಸಭಾ ಕಾರ್ಯಕ್ರಮದ ಬಳಿಕ ಮಧ್ಯಾಹ್ನ 3 ರಿಂದ ಸಂಜೀವಿನಿ ಒಕ್ಕೂಟದಿಂದ ಸಂಜೀವಿನಿ ಸಂತೆ, ವಸ್ತು ಪ್ರದರ್ಶನ ಮೇಳ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.