

ಕಾರ್ಕಳ,ಸೆ,16: ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಅಂಗವಾಗಿ ಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ಒಂದು ತಿಂಗಳ ಕಾಲ ಕಾರ್ಕಳ ಬಿಜೆಪಿ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ ಅಂಗವಾಗಿ ಪೂರ್ವಭಾವಿ ಸಭೆಯು ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಅಧ್ಯಕ್ಷತೆಯಲ್ಲಿ ಕಾರ್ಕಳ ವಿಕಾಸ ಕಚೇರಿಯಲ್ಲಿ ನಡೆಯಿತು.
ಭಿಯಾನದ ಆರಂಭದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ ದೀಪ’ ಕಾರ್ಯಕ್ರಮ ನಡೆಯಲಿದ್ದು,ಈ ಅವಧಿಯಲ್ಲಿ 13 ವಿಭಿನ್ನ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿ ಫಲಾನುಭವಿಯ ಮನೆಯಲ್ಲಿ ದೇವರ ಮುಂದೆ ದೀಪ ಬೆಳಗಿಸಿ ನರೇಂದ್ರ ಮೋದಿ ಅವರಿಗೆ ಇನ್ನಷ್ಟು ಆಯುಷ್ಯ, ಆರೋಗ್ಯ, ಶಕ್ತಿ ಹಾಗೂ ಜನಸೇವೆ ಮಾಡುವ ಭಾಗ್ಯವನ್ನು ದೇವರು ಕರುಣಿಸಲಿ. ದೇಶದ ಅಭಿವೃದ್ಧಿಗೆ ಇನ್ನಷ್ಟು ಶಕ್ತಿ ನೀಡಲಿ ಎಂದು ಪ್ರಾರ್ಥಿಸಿ, ಜನರ ಆಶೀರ್ವಾದ ಪಡೆಯುವ ಸಂಕಲ್ಪ ಮಾಡಲು ಕಾರ್ಯಕರ್ತರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಸಭೆಗೆ ಮಾಹಿತಿ ನೀಡಿದರು ಹಿರಿಯರಾದ ಜಯರಾಮ್ ಸಾಲ್ಯಾನ್ ಸೂರ್ಯಕಾಂತ್ ಶೆಟ್ಟಿ ಅಂಥೋನಿ ಡಿಸೋಜ. ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಶೆಟ್ಟಿ ಸತೀಶ್ ಪೂಜಾರಿ ಉಪಸ್ಥಿತರಿದ್ದರು ಮಂಡಲ ಕಾರ್ಯದರ್ಶಿ ಕರುಣಾಕರ್ ಕೋಟ್ಯಾನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.







.
.
.
.
.
.
.
.
.
.
.
.
.
.
.
.
.
.
.
.
