Share this news

ಛತ್ತೀಸ್‌ಗಢ, ನ.18: ಆಂಧ್ರಪ್ರದೇಶದಲ್ಲಿ ನಡೆದ ಎನ್‌ಕೌಂಟರ್ ನಲ್ಲಿ 26 ಸಶಸ್ತ್ರ ದಾಳಿಗಳ ರೂವಾರಿಯಾಗಿದ್ದ ಟಾಪ್ ನಕ್ಸಲ್ ಕಮಾಂಡರ್ ಮಾಡ್ವಿ ಹಿಡ್ಮಾ ಸಾವನ್ನಪ್ಪಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗಿನ ಜಾವ ಹಿಡ್ಮಾ ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತನಾಗಿದ್ದಾನೆ. ಹಲವಾರು ಮಾವೋವಾದಿ ಅಡಗುತಾಣಗಳನ್ನು ಹೊಂದಿರುವ ಆಂಧ್ರಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳ ತ್ರಿ-ಜಂಕ್ಷನ್ ಬಳಿ ಈ ಎನ್‌ಕೌಂಟರ್ ನಡೆದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಕನಿಷ್ಠ ಆರು ಬಂಡುಕೋರರ ಮೃತದೇಹಗಳು ಪತ್ತೆಯಾಗಿದ್ದು, ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. 1981 ರಲ್ಲಿ ಮಧ್ಯಪ್ರದೇಶದಲ್ಲಿದ್ದ ಸುಕ್ಮಾದಲ್ಲಿ ಜನಿಸಿದ ಹಿಡ್ಮಾ, ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿಯ ಬೆಟಾಲಿಯನ್ ಅನ್ನು ಮುನ್ನಡೆಸಿದ್ದ ಮತ್ತು ಸಿಪಿಐ ಮಾವೋವಾದಿಗಳ ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯ ಸದಸ್ಯ ಕೂಡ ಆಗಿದ್ದ. ಮಾಡ್ವಿ ಹಿಡ್ಮಾನನ್ನು ಹಿಡಿದುಕೊಟ್ಟವರಿಗೆ 1 ಕೋಟಿ ರೂ. ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು. ಆತನ ಪತ್ನಿ ರಾಜೆ ಅಲಿಯಾಸ್ ರಾಜಕ್ಕಾ ಕೂಡ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಮಾಡ್ವಿ 1996ರಿಂದ ತನ್ನ 17ನೇ ವಯಸ್ಸಿನಲ್ಲಿ ನಕ್ಸಲ್ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ. ಹಿಡ್ಮಾನನ್ನು ಹಿದ್‌ಮಾಲು ಹಾಗೂ ಸಂತೋಷ್ ಹೆಸರಿನಿಂದ ಕೂಡ ಕರೆಯಲಾಗುತ್ತಿತ್ತು. ಈತ 150ಕ್ಕೂ ಅಧಿಕ ಸೈನಿಕರನ್ನು ಕೊಂದಿದ್ದ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *