Share this news

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಇದರ ಪರಿಣಾಮ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಸಾಲು ಸಾಲು ಗುಡ್ಡ ಕುಸಿತ ಉಂಟಾಗಿದೆ. ಮತ್ತೊಂದೆಡೆ ಮಳೆ ನೀರು ರಸ್ತೆಯ ಮೇಲೆ ನದಿಯಂತೆ ಹರಿಯುತ್ತಿದೆ. ಇದರಿಂದ ಚಾರ್ಮಾಡಿ ಘಾಟ್‌ನಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು,ವಾಹನ ಸವಾರರು ತೀವ್ರ ಪರದಾಡುತ್ತಿದ್ದಾರೆ.

ಕೊಟ್ಟಿಗೆಹಾರ, ಬಾಳೂರು, ಬಣಕಲ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು (ಅಕ್ಟೋಬರ್ 09) ಸಂಜೆ ಕಳೆದ ಎರಡು ಗಂಟೆಯಿAದ ನಿರಂತರವಾಗಿ ಎಡಬಿಡದೇ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿನಲ್ಲಿ ಗುಡ್ಡ ಕುಸಿದಿದೆ. ಭಾರೀ ಮಳೆಯಿಂದಾಗಿ ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ.

ಮಂಗಳೂರಿನ ಬೆಳ್ತಂಗಡಿ ತಾಲೂಕಿನ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದ್ದು, ಇದರಿಂದ ಕಕ್ಕಿಂಜೆ, ಚಾರ್ಮಾಡಿ ಘಾಟ್ ರಸ್ತೆಗಳು ಜಲಮಯವಾಗಿದೆ. ಚಾರ್ಮಾಡಿಯ 3ನೇ ತಿರುವಿನಲ್ಲಿ ರಸ್ತೆ ಮೇಲೆ ನೀರು ನದಿಯಂತೆ ಹರಿಯುತ್ತಿದೆ. ಅಲ್ಲದೇ ನೆರಿಯಾ, ಪುಲ್ಲಾಜೆ ಸೇತುವೆಗಳು ಮುಳುಗಡೆಯಾಗಿದ್ದು, ವಾಹನ ಸಂಚಾರ ಮತ್ತು ಜನಜೀವನ ಅಸ್ತವ್ಯವಾಗಿದೆ.

ಮುಂಗಾರು ಸಂದರ್ಭದಲ್ಲಿ ಚಿಕ್ಕಮಗಳೂರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದ್ದು. ಚಾರ್ಮಾಡಿ ಘಾಟ್‌ನಲ್ಲಿ 10ನೇ ತಿರುವಿನಲ್ಲಿ ಗುಡ್ಡ ಕುಸಿದಿತ್ತು. ಇದರಿಂದ ದಕ್ಷಿಣ ಕನ್ನಡಕ್ಕೆ ಸಂಪರ್ಕ ಕಡಿತವಾಗಿತ್ತು. ಹಾಸನ ಮತ್ತು ಚಾರ್ಮಾಡಿ ಘಾಟ್ ಮೂಲಕ ದಕ್ಷಿಣ ಕನ್ನಡಕ್ಕೆ ಹೋಗುವ ಮಾರ್ಗಗಳು ಸಹ ಬಂದ್ ಆಗಿದ್ದವು. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ರೈಲು ವ್ಯವಸ್ಥೆ ಮಾಡಲಾಗಿತ್ತು. ಇದೀಗ ಮತ್ತೆ ಗುಡ್ಡ ಕುಸಿದಿದ್ದು, ಚಾರ್ಮಾಡಿ ಘಾಟ್‌ನ ರಸ್ತೆಗಳಲ್ಲಿ ನೀರು ನದಿಯಂತೆ ಹರಿತ್ತಿದೆ.

Leave a Reply

Your email address will not be published. Required fields are marked *