

ಬೆಂಗಳೂರು:ರಾಜ್ಯ ಸರ್ಕಾರವು ಆಡಳಿತಾತ್ಮಕ ಬದಲಾವಣೆ ಮಾಡಿದ್ದು,ಮಂಗಳವಾರ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು ಸೇರಿ ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶಿಸಿದೆ.
ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಡಾ.ವಿದ್ಯಾಕುಮಾರಿ ಅವರನ್ನು ವರ್ಗಾವಣೆ ಮಾಡಿದ್ದು, ಇ-ಆಡಳಿತ ನಿರ್ದೇಶಕರಾಗಿದ್ದ ಸ್ವರೂಪ ಟಿ.ಕೆ ಅವರನ್ನು ಉಡುಪಿ ಡಿಸಿಯಾಗಿ ನೇಮಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ವರ್ಗಾವಣೆ ಮಾಡಿದ್ದು, ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯಕ್ತರಾಗಿದ್ದ ದರ್ಶನ್ ಎಚ್.ವಿ ಅವರನ್ನು ದ.ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮುಲ್ಲೈ ಮುಗಿಲನ್ ಅವರನ್ನು ನೋಂದಣಿ ಮತ್ತು ಮುದ್ರಾಂಕದ ಐಜಿ ಯಾಗಿ ನೇಮಕ ಮಾಡಲಾಗಿದೆ.








