

ಬೆಂಗಳೂರು, ಆ,19(ವಿಧಾನಸೌಧ): ಧರ್ಮಸ್ಥಳದ ಹೆಸರಿಗೆ ಕಳಂಕ ಬರಬಾರದು ಎಂಬ ಕಾರಣಕ್ಕೆ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ.ಈ ಕುರಿತು ಶೀಘ್ರವೇ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಅವರು ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಗೃಹ ಸಚಿವರು ಉತ್ತರವನ್ನು ಕೊಟ್ಟಿದ್ದಾರೆ. ಅದಷ್ಟು ಬೇಗ ಸತ್ಯ ಹೊರಬೀಳಲಿದೆ ಎಂದರು.














