Share this news

 ಮಂಗಳೂರು,ಮಾ 17: ಇರಾನ್, ಅಮೆರಿಕ, ಇಸ್ರೇಲ್ ನಡುವಿನ ಯುದ್ಧದ ಉದ್ವಿಗ್ನತೆಯ ನಡುವೆಯೇ ಇಂದು ಮತ್ತೆರಡು ತೈಲ ಹಡಗುಗಳು ಭಾರತಕ್ಕೆ ಬಂದು ಸೇರಲಿದ್ದು,ಮಂಗಳೂರಿನಲ್ಲಿ 26 ಸಾವಿರ ಮೆಟ್ರಿಕ್‌ ಟನ್ LPG ಅನ್‌ಲೋಡ್‌ ಆಗಲಿದೆ. ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಅಡ್ಡಿ ಉಂಟಾಗಿದ್ದು, ನೂರಾರು ತೈಲ ಮತ್ತು ಎಲ್‌ಪಿಜಿ (LPG) ಸಾಗಿಸುತ್ತಿದ್ದ ಹಡಗುಗಳ ಸಂಚಾರಕ್ಕೆ ಅಡ್ಡಿಯಾಗಿದ್ದವು. ಆದರೆ ಭಾರತದ ರಾಜತಾಂತ್ರಿಕ ಪ್ರಯತ್ನಗಳ ಫಲವಾಗಿ ಇರಾನ್ ಈಗಾಗಲೇ ನಾಲ್ಕು ಹಡಗುಗಳಿಗೆ ಅನುಮತಿ ನೀಡಿದ್ದು, ಅವುಗಳಲ್ಲಿ 2 ಹಡಗುಗಳು ಈಗಾಗಲೇ ಭಾರತ ತಲುಪಿವೆ. ಮಾರ್ಚ್ 12ರಂದು ಕಚ್ಚಾ ತೈಲ ಹೊತ್ತ ಮೊದಲ ಹಡಗು ಮುಂಬೈ ತಲುಪಿತ್ತು. ನಂತರ ಮಾರ್ಚ್ 16ರಂದು ಎಲ್‌ಪಿಜಿ ಸಾಗಿಸುತ್ತಿದ್ದ ‘ಶಿವಾಲಿಕ್’ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಆಗಮಿಸಿತು. ಈ ಹಡಗಿನಲ್ಲಿ ಒಟ್ಟು 46 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ ಇದ್ದು, ಅದರಲ್ಲಿ ಸುಮಾರು 20 ಸಾವಿರ ಮೆಟ್ರಿಕ್ ಟನ್ಅನ್ನು ಮುಂದ್ರಾ ಬಂದರಿನಲ್ಲಿ ಅನ್‌ಲೋಡ್ ಮಾಡಲಾಗಿದೆ.

ಉಳಿದ 26 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿಯನ್ನು ಇಂದೇ ಮಂಗಳೂರು ಬಂದರಿಗೆ ತಂದು ಅನ್‌ಲೋಡ್ ಮಾಡುವ ಸಾಧ್ಯತೆ ಇದೆ. ಇದರಿಂದ ದೇಶದಲ್ಲಿ ಉಂಟಾಗಿದ್ದ ಎಲ್‌ಪಿಜಿ ಕೊರತೆ ಭೀತಿಗೆ ತಾತ್ಕಾಲಿಕ ರಿಲೀಫ್ ಸಿಗುವ ನಿರೀಕ್ಷೆಯಿದೆ.

ಇದರ ಜೊತೆಗೆ ‘ನಂದಾದೇವಿ’ ಮತ್ತು ‘ಜಗ್ ಲಾಡ್ಕಿ’ ಎಂಬ ಮತ್ತೆರಡು ಹಡಗುಗಳು ಇಂದು ಭಾರತ ತಲುಪುವ ಸಾಧ್ಯತೆ ಇದೆ. ‘ನಂದಾದೇವಿ’ ಹಡಗಿನಲ್ಲಿ ಸುಮಾರು 40 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ ಇದ್ದು, ‘ಜಗ್ ಲಾಡ್ಕಿ’ ಹಡಗು ಸುಮಾರು 81 ಸಾವಿರ ಟನ್ ಕಚ್ಚಾ ತೈಲವನ್ನು ಹೊತ್ತು ಬರುತ್ತಿದೆ.
ಒಟ್ಟಿನಲ್ಲಿ, ಜಾಗತಿಕ ಉದ್ವಿಗ್ನತೆ ನಡುವೆಯೂ ಭಾರತಕ್ಕೆ ತೈಲ ಮತ್ತು ಎಲ್‌ಪಿಜಿ ಸರಬರಾಜು ಕ್ರಮೇಣ ಪುನರಾರಂಭವಾಗುತ್ತಿರುವುದು ಸ್ವಲ್ಪ ಮಟ್ಟಿನ ನಿಟ್ಟಿನಲ್ಲಿ ನೆಮ್ಮದಿ ತಂದಿದೆ.

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

Leave a Reply

Your email address will not be published. Required fields are marked *