ಕಾರ್ಕಳ: ಕಾರ್ಕಳ, ಅಜೆಕಾರು ಸೇರಿದಂತೆ ಹಲವು ಕಡೆ ದನಗಳನ್ನು ಕಳವು ಮಾಡಿ ಕಡಿದು ಮಾಂಸ ಮಾಡಿ ಮಾರಾಟ ಮಾಡಿರುವ ಇಬ್ಬರು ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಮಂಗಳೂರಿನ ಬಜ್ಪೆ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೂಡುಬಿದಿರೆ ತಾಲೂಕಿನ ಕರಿಂಜೆ ಗ್ರಾಮದ ಸುವರ್ಣ ನಗರದ ಮೊಹಮ್ಮದ್ ರಫೀಕ್ ಯಾನೆ ರಫೀಕ್ (31) , ಕಲ್ಲಬೆಟ್ಟು ಗ್ರಾಮದ ನೀರಳಿಕೆ ಹೌಸ್‌ನ ಶೌಕತ್ ಅಲಿ ಯಾನೆ ಶೌಕತ್ (34) ಬಂಧಿತ ಆರೋಪಿಗಳು. ಬಂಧಿತರಿAದ ದನ ಕಳವು ಮಾಡಲು ಬಳಸಿದ್ದ ಸುಮಾರು 3 ಲಕ್ಷ ರೂ. ಮೌಲ್ಯದ ಬಿಳಿ ಬಣ್ಣದ ರಿಡ್ಜ್ ಕಾರು ಹಾಗೂ ಇತರೆ ಸೊತ್ತುಗನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಅ.19ರAದು ತೆಂಕ ಎಡಪದವು ಗ್ರಾಮ, ಪಂಚಾಯತ್ ಕಚೇರಿಯ ಬಳಿ ಮೇಯಲು ಬಿಟ್ಟಿದ್ದ ದನಗಳನ್ನು ಮತ್ತು ಅ.21ರಂದು ತೆಂಕ ಎಡಪದವು ಗ್ರಾಮದ ಪದರಂಗಿ ಕೊಡೇಲ್ ಎಂಬಲ್ಲಿ ಮೇಯಲು ಬಿಟ್ಟ ದನಗಳನ್ನು ಅಮಾನವೀಯವಾಗಿ ಕಾರಿನಲ್ಲಿ ತುಂಬಿಸಿ ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿತ್ತು. ಪ್ರಕರಣದ ಬೆನ್ನತ್ತಿ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಇಬ್ಬರು ಆರೋಪಿಗಳ ವಿರುದ್ಧ ಮೂಡುಬಿದಿರೆ, ಉಡುಪಿಯ ಅಜೆಕಾರು ಮತ್ತು ಕಾರ್ಕಳ ಗ್ರಾಮಾಂತರ ಮತ್ತು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ದನ ಕಳವಿಗೆ ಸಂಬAಧಿಸಿ ಪ್ರಕರಣಗಳು ದಾಖಲಾಗಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.
