Share this news

ಉಡುಪಿ : ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಾಗೂ ಕ್ರಿಯೆಟಿವ್ ಪಿ.ಯು.ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 2024-25ನೇ ಸಾಲಿನಲ್ಲಿ ನಡೆಸಲಾದ ಪದವಿ ಪೂರ್ವ ಕಾಲೇಜುಗಳ ಮೈಸೂರು ವಿಭಾಗೀಯ ಮಟ್ಟದ ವತಿಯಿಂದ ಡಿಸೆಂಬರ್ 9ರಂದು ನಡೆದ 2024-25ನೇ ಸಾಲಿನ ಉಡುಪಿ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಇಂಗ್ಲಿಷ್ ಪ್ರಬಂಧದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಮಯೂರ್.ಎಂ.ಗೌಡ ದ್ವಿತೀಯ ಸ್ಥಾನವನ್ನು ಹಾಗೂ ಪ್ರಥಮ ವಿಜ್ಞಾನ ವಿಭಾಗದ ಜಾಹ್ನವಿ ಜೆ. ಶೆಟ್ಟಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

ಇವರಿಗೆ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭಹಾರೈಸಿದ್ದಾರೆ.

 

Leave a Reply

Your email address will not be published. Required fields are marked *