
ಬೆಂಗಳೂರು, ಜೂ.6: ರಾಜ್ಯದಲ್ಲಿ ವಿದೇಶಿ ಉಗ್ರರ ನೆಟ್‌ವರ್ಕ್ ಮತ್ತು ಸ್ಲೀಪರ್ ಸೆಲ್‌ಗಳು ಸಕ್ರಿಯವಾಗಿರುವ ಆತಂಕಕಾರಿ ವಿಚಾರ ಬಯಲಾಗಿದೆ. ಪಾಕಿಸ್ತಾನ ಮೂಲದ ಶಂಕಿತ ಉಗ್ರನೊಂದಿಗೆ ನಿರಂತರ ಸಂಪರ್ಕದಲ್ಲಿದ್ದುಕೊAಡು, ದೇಶದ ಭದ್ರತೆಗೆ ಧಕ್ಕೆ ತರಲು ಹಾಗೂ ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ ಇಬ್ಬರು ಯುವಕರನ್ನು ತುಮಕೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತುಮಕೂರು ನಿವಾಸಿ ಅಲ್ಲಾಬಕ್ಷು (24) ಮತ್ತು ದಾವಣಗೆರೆಯ ಬಿಡಿ ಲೇಔಟ್ ನಿವಾಸಿ ಜಮೀರ್ ಖಾನ್ (22) ಎಂದು ಗುರುತಿಸಲಾಗಿದೆ. ಕೇಂದ್ರ ಗುಪ್ತಚರ ಇಲಾಖೆ ನೀಡಿದ ಮಹತ್ವದ ಸುಳಿವಿನ ಆಧಾರದ ಮೇಲೆ ಈ ಜಂಟಿ ಕಾರ್ಯಾಚರಣೆ ನಡೆದಿದೆ.
ಕೇಂದ್ರ ಗುಪ್ತಚರ ಸಂಸ್ಥೆಗಳು ಮೊದಲಿಗೆ ಅನುಮಾನಾಸ್ಪದ ಆನ್‌ಲೈನ್ ಚಟುವಟಿಕೆಗಳನ್ನು ಪತ್ತೆಹಚ್ಚಿದ್ದರು. ನಂತರ ಆರೋಪಿಯ ಡಿಜಿಟಲ್ ಸಾಕ್ಷ್ಯಗಳ ಮೇಲ್ವಿಚಾರಣೆ ಮಾಡಲು ಪ್ರಾರಂಭಿಸಿದ್ದವು. ಬಳಿಕ ಏಜೆನ್ಸಿಗಳು ಮುಂದಿನ ಕ್ರಮಕ್ಕಾಗಿ ಕರ್ನಾಟಕ ಪೊಲೀಸರೊಂದಿಗೆ ಗುಪ್ತಚರ ಮಾಹಿತಿಯನ್ನು ಹಂಚಿಕೊAಡಿದ್ದವು. ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸಿದ ತುಮಕೂರು ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಗುರುವಾರ ರಾತ್ರಿ ಕ್ಯಾತಸಂದ್ರ ಪ್ರದೇಶದಿಂದ ಶಂಕಿತನನ್ನು ಬಂಧಿಸಿದ್ದಾರೆ. ಮೂಲಗಳ ಪ್ರಕಾರ, ಇವರು ಪಾಕಿಸ್ತಾನದ ಐಸಿಸ್ ಉಗ್ರ ಸಂಘಟನೆಗೆ ಫಂಡಿAಗ್ ಮಾಡುತ್ತಿದ್ದ ಜಾಲದೊಂದಿಗೆ ನೇರ ಸಂಪರ್ಕ ಹೊಂದಿದ್ದರು. ಅಷ್ಟೇ ಅಲ್ಲದೆ, ಭಾರತದ ವಿವಿಧೆಡೆ ಭಾರಿ ಪ್ರಮಾಣದ ಬಾಂಬ್ ಸ್ಫೋಟಗಳನ್ನು ನಡೆಸಲು ವ್ಯವಸ್ಥಿತ ಸಂಚು ಹೂಡುತ್ತಿದ್ದರು ಎಂಬ ಆಘಾತಕಾರಿ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಇತ್ತೀಚೆಗೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದ್ದ ಮೌಲ್ವಿ ಹತ್ಯೆಗೆ ದೇಶದೊಳಗೆ ಭೀಕರ ಪ್ರತಿಕಾರ ತೀರಿಸಿಕೊಳ್ಳುವ ಕುರಿತು ಈ ವಾಟ್ಸ್ ಪ್ ಗ್ರೂಪ್‌ನಲ್ಲಿ ಉಗ್ರ ರಾಣಾ ಚರ್ಚೆ ಆರಂಭಿಸಿದ್ದ ಎನ್ನಲಾಗಿದೆ. ದೇಶದ ಆಂತರಿಕ ಭದ್ರತೆಗೆ ತೀವ್ರ ಧಕ್ಕೆ ಉಂಟಾಗುವ ಮತ್ತು ಭಯೋತ್ಪಾದಕ ದಾಳಿ ನಡೆಯುವ ಗಂಭೀರ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ ಗುಪ್ತಚರ ಇಲಾಖೆಯು ರಾಜ್ಯ ಪೊಲೀಸರನ್ನು ಅಲರ್ಟ್ ಮಾಡಿತ್ತು.
ಮೊದಲಿಗೆ ತುಮಕೂರಿನಲ್ಲಿ ಅಲ್ಲಾಬಕ್ಷುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ದಾವಣಗೆರೆಯ ಜಮೀರ್ ಖಾನ್ ಹೆಸರನ್ನು ಬಾಯಿಬಿಟ್ಟಿದ್ದ. ಸದ್ಯ ಇಬ್ಬರನ್ನೂ ಬಂಧಿಸಿರುವ ತುಮಕೂರು ನಗರ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದು, ರಾಜ್ಯದಲ್ಲಿ ಇವರ ಹಿಂದೆ ಇರುವ ದೊಡ್ಡ ಸ್ಲೀಪರ್ ಸೆಲ್ ನೆಟ್‌ವರ್ಕ್ ಭೇದಿಸಲು ಮುಂದಾಗಿದ್ದಾರೆ.


.
.
.
.
.
.
.
.
.
.
.
.
.
.
.
.
.
.
.
.
