ಉಡುಪಿ: ಅಪಾರ್ಟ್‌ಮೆಂಟ್ ವೊಂದರ 14ನೇ ಮಹಡಿಯಿಂದ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಮಂಗಳವಾರ (ಫೆ.25) ಮಧ್ಯಾಹ್ನ ನಡೆದಿದೆ.
ಮೃತ ದುರ್ದೈವಿಯನ್ನು ಲೇಖಿರಾಜ್ (29) ಎಂದು ಗುರುತಿಸಲಾಗಿದೆ. ಉಡುಪಿಯ ಬ್ರಹ್ಮಗಿರಿ ಸಮೀಪದ ಡಾ। ಜಿ. ಶಂಕರ್ ರಸ್ತೆಯಲ್ಲಿರುವ ಗ್ರಾಸ್ಲ್ಯಾಂಡ್ ಅಪಾರ್ಟ್ಮೆಂಟ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ.
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಇದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
