
ಉಡುಪಿ, ಫೆ.18: ಭಾರತೀಯ ನೌಕಾ ಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಇನ್ನೋರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮಲ್ಪೆ ಬಂದರಿನ ಕೊಚ್ಚಿನ್ ಶಿಪ್ ಯಾರ್ಡ್‌ಗೆ ಸಂಬಂಧಿಸಿದ ನೌಕರರು ನೌಕಾಪಡೆಯ ಹಡಗುಗಳ ಸಂಖ್ಯೆಗಳ ಗೌಪ್ಯ ಮಾಹಿತಿಯನ್ನು ವಾಟ್ಸ್ಆ್ಯಪ್ ಮತ್ತು ಫೇಸ್‌ಬುಕ್ ಮೂಲಕ ಪಾಕಿಸ್ತಾನದ ಜತೆ ಹಂಚಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ 21 ವರ್ಷದ ಆಲಿಫ್ ಇಸ್ಲಾಂ ಎಂದು ಗುರುತಿಸಲಾಗಿದೆ. ಆತ ಕೇರಳದ ಇಡುಕ್ಕಿ ಜಿಲ್ಲೆಯ ಮರಾಯು ಗ್ರಾಮದವನು ಎನ್ನಲಾಗಿದ್ದು, ಭಾರತೀಯ ನೌಕಾ ಸೇನೆಗೆ ಸಂಬಂಧಿಸಿದ ಮಹತ್ವದ ಮಾಹಿತಿಯನ್ನು ರಹಸ್ಯವಾಗಿ ಪಾಕಿಸ್ತಾನಕ್ಕೆ ರವಾನಿಸಿರುವ ಆರೋಪ ಹಿನ್ನೆಲೆ, ಉಡುಪಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಆರೋಪಿಗಳು ಕಳೆದ ಒಂದೂವರೆ ವರ್ಷಗಳಿಂದ ಹಡಗುಗಳಿಗೆ ಸಂಬಂಧಿಸಿದ ರಹಸ್ಯ ಮಾಹಿತಿ, ತಾಂತ್ರಿಕ ಮಾಹಿತಿಗಳನ್ನು ವಾಟ್ಸ್ಆ್ಯಪ್ ಮೂಲಕ ಪಾಕಿಸ್ತಾನದಲ್ಲಿ ಸಂಪರ್ಕದಲ್ಲಿದ್ದವರಿಗೆ ಕಳುಹಿಸುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿತ್ತು.

.
.
.
.
.
.
.
.
.
.
