ಉಡುಪಿ: ಲೋಕಸಭಾ ಚುನಾವಣೆಯ ಕಾವು ಏರುತ್ತಿದ್ದು ಇತ್ತ ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆಯೂ ಜೋರಾಗಿದೆ. ಇತ್ತ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಬುಧವಾರ ಪಕ್ಷದ ನಾಯಕರ ಜತೆ ಸೇರಿ ನಾಮಪತ್ರ ಸಲ್ಲಿಸಿದ್ದಾರೆ. ಬುಧವಾರ ಬೆಳಗ್ಗೆ ಪಕ್ಷದ ಹಿರಿಯ ನಾಯಕರೊಂದಿಗೆ ಸೇರಿ ಕಾರ್ಯಕರ್ತರು ಹಾಗೂ ಬೇಮಬಲಿಗರ ಜತೆ ಸಭೆ ನಡೆಸಿ ಬಳಿಕ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಚುನಾವಣಾಧಿಕಾರಿ ಕೆ.ವಿದ್ಯಾಕುಮಾರಿಯವರಿಗೆ ತನ್ನ ಉಮೇದುವಾರಿಕೆ ಸಲ್ಲಿಸಿದರು
ಈ ಸಂದರ್ಭದಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮೋಟಮ್ಮ, ಅಂಶುಮAತ್ ಗೌಡ ಉಪಸ್ಥಿತರಿದ್ದರು