Share this news

 

 

 

 

ಕಾರ್ಕಳ,ಜ.16:ಜಾಗತಿಕ ಸವಾಲುಗಳಿಗೆ ಉತ್ತರ ನೀಡಲು ಖಾಸಗೀ ಶಿಕ್ಷಣ ಸಂಸ್ಥೆಗಳಿAದ ಸಾದ್ಯವಾಗಿದೆ.ವಿದ್ಯಾರ್ಥಿಗಳ ಸಾಧನೆಗೆ ಮತ್ತು ಅವರ ಪೊಲಿತಾಂಶಗಳ ಸುಧದಾರಣೆಗೆ ಖಾಸಗೀ ಸಂಸ್ಥೆಗಳ ಪಾತ್ರ ದೊಡ್ಡದು. ಶಿಕ್ಷಣ ಸಂಸ್ಥೆಯೊಳಗೆ ವ್ಯಾಪಾರ ಮನೋಧರ್ಮದ ಬದಲಾಗಿ ಸೇವಾ ಮನೋಭಾವವೇ ಮೂಲವಾಗಬೇಕು.ಅನಗತ್ಯ ಟೀಕೆ ಟಿಪ್ಪಣಿಗಳಿಗೆ ಚಿಂತಿಸದೆ ಫಲಿತಾಂಶ ದ ಕಡೆಗೆ ದುಡಿಯುವ ಮನಸ್ಸು ನಮ್ಮದಾಗಬೇಕು, ಪ್ರತೀ ಜಿಲ್ಲೆಗಳಲ್ಲೂ ಕುಪ್ಮಾ ಸಂಘಟನೆ ಬಲವಾಗಬೇಕು ಎಂದು ಕುಪ್ಮಾ ರಾಜ್ಯ ಸಮಿತಿಯ ಅಧ್ಯಕ್ಷರಾದ ಮೋಹನ್ ಆಳ್ವಾ ಹೇಳಿದರು.
ಅವರು ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ನಡೆದ ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ(ಕುಪ್ಮಾ) ಸಮಿತಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ನೂತನ ಪದಾದಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿ ಮಾತನಾಡಿ ಇಲಾಖೆ ಮತ್ತು ಕುಪ್ಮಾ ಸಂಘಟನೆ ಜೊತೆಗೂಡಿ ಕೆಲಸ ನಿರ್ವಹಿಸಬೇಕು. ಪ್ರತೀ ಮಗುವಿಗೂ ಶಿಕ್ಷಣ ಸಿಗಲು ಖಾಸಗೀ ಸಂಸ್ಥೆಗಳ ಪಾಲು ದೊಡ್ಡದು ಎಂದು ಶುಭ ಹಾರೈಸಿದರು.
ಕುಪ್ಮಾ ರಾಜ್ಯ ಸಮಿತಿಯ ಗೌರವಾಧ್ಯಕ್ಷರಾದ ರಾಧಾಕೃಷ್ಣ ಶೆಣೈ ಮಾತನಾಡಿ ಎಲ್ಲಾ ಖಾಸಗೀ ಸಂಸ್ಥೆಗಳು ಆರೋಗ್ಯಕರವಾದ ಸ್ಪರ್ಧೆಗಳು ಇರಲಿ ಎಂದರು.ಕಾರ್ಯಕ್ರಮದ ಆದ್ಯಕ್ಷತೆಯನ್ನ ವಹಿಸಿದ್ದ ಡಾ. ಪ್ರಶಾಂತ್ ಶೆಟ್ಟಿ ಮಾತನಾಡಿ,ಖಾಸಗೀ ಶಿಕ್ಷಣ ಸಂಸ್ಥೆಗಳಿಗೆ ದ್ವನಿಯಾಗಿ ಕುಪ್ಮಾ ಕೆಲಸನಿರ್ವಹಿಸುತ್ತಿದೆ ಎಂದರು.
ಉಡುಪಿ ಜಿಲ್ಲಾ ಕುಪ್ಮಾ ಸಮಿತಿಯ ಖಜಾಂಜಿ ಡಾ. ಸುಧಾಕರ್‌ಶೆಟ್ಟಿ ಆಶಯ ನುಡಿಗಳನ್ನಾಡಿ ವಿದ್ಯಾರ್ಥಿಗಳ ಏಳಿಗೆಗೆ ಅವಿರಥವಾಗಿ ಶ್ರಮವಹಿಸಲು ಎಲ್ಲರೂ ಒಗ್ಗೂಡಿ ಕೆಲಸ ನಿರ್ವಹಿಸಬೇಕು ಎಂದರು.
ಪ್ರಾಸ್ತಾವಿಕ ಮಾತುಗಳನ್ನಾಡಿದ ಕುಪ್ಮಾ ಉಡುಪಿ ಜಿಲ್ಲಾ ಸಮಿತಿಯ ನೂತನ ಅಧ್ಯಕ್ಷರಾದ ಸಿ.ಎ ಗೋಪಾಲಕೃಷ್ಣ ಭಟ್ ಮಾತನಾಡಿಅನುದಾನ ರಹಿತ ಪದವಿಪೂರ್ವ ಕಾಲೇಜುಗಳ ಹೋರಾಟಗಳಿಗೆ ಸಂಘಟನೆಯ ಅವಶ್ಯಕತೆ ಇದೆ ಎಂದರು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಸಮಿತಿಯ ಪದಾದಿಕಾರಿಗಳು , ಶಿಕ್ಷಣ ತಜ್ಞರು, ಶಿಕ್ಷಕರು, ಉಪಸ್ಥಿತರಿದ್ದರು.
ಸಿ.ಎ ಗೋಪಾಲಕೃಷ್ಣ ಭಟ್ ಸ್ವಾಗತಿಸಿ, ಕುಪ್ಮಾ ಉಡುಪಿ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಅಶ್ವತ್ಥ್ ಎಸ್ ಎಲ್ ವಂದಿಸಿ, ಲೋಹಿತ್ ಎಸ್ ಕೆ ನಿರೂಪಿಸಿದರು.

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *