ಉಡುಪಿ ಅ,17: ಕರ್ನಾಟಕ ರಾಜ್ಯ ಶಾಲಾ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆ (ರಿ ) ಜಿಲ್ಲಾ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ ಮತ್ತು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಡುಪಿ ಜಿಲ್ಲೆ ಸಹಯೋಗದೊಂದಿಗೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುವಂದನಾ ಕಾರ್ಯಕ್ರಮ, ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಮತ್ತು ಜಿಲ್ಲಾ ಮಟ್ಟದ ಅತ್ಯುತ್ತಮ ಎಸ್ ಡಿ ಎಂ ಸಿ ಮತ್ತು ಶಾಲೆ ಪ್ರಶಸ್ತಿ ಪ್ರಧಾನ ಸಮಾರಂಭವು ಶ್ರೀಕೃಷ್ಣ ಮಠ ರಾಜಾಂಗಣ ಸಭಾಭವನದಲ್ಲಿ ಜರುಗಿತು.
ಪರ್ಯಾಯ ಶ್ರೀ ಸುಗುಣೇoದ್ರ ತೀರ್ಥ ಸ್ವಾಮೀಜಿಗಳ ಶುಭಾಶೀರ್ವಾದದೊಂದಿಗೆ ಕಾರ್ಯಕ್ರಮ ಉದ್ಘಾಟನೆಗೊಂಡಿತು.ಈ ಕಾರ್ಯಕ್ರಮದಲ್ಲಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಪ್ರಾಮಾಣಿಕ ಮತ್ತು ನಿಸ್ವಾರ್ಥ ಸೇವೆ ಸಲ್ಲಿಸಿದ ಕಾರ್ಕಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡಾರು ವಿನ ಮುಖ್ಯೋಪಾಧ್ಯಾಯರಾದ ಶ್ರೀಮತಿ ಜಯಕೃಷ್ಣ ಮೊಯ್ಲಿ,ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆರ್ವಾಶೆ ಮೈನ್ ನ ಮುಖ್ಯೋಪಾಧ್ಯಾಯರಾದ ಶ್ರೀ ಕೃಷ್ಣ ನಾಯ್ಕ, ಸೈಂಟ್ ಲಾರೆನ್ಸ್ ಪ್ರೌಢಶಾಲೆ ಅತ್ತೂರು ಕಾರ್ಕಳದ ಮುಖ್ಯೋಪಾಧ್ಯಯರಾದ ಶ್ರೀ ಸುಬ್ರಹ್ಮಣ್ಯ ಉಪಾಧ್ಯ ಬಿ ಯವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಿರಣ್ ಎಸ್ ಗಂಗಣ್ಣನವರು ಪ್ರಧಾನ ಮಾಡಿದರು.
ಸಭಾ ವೇದಿಕೆಯಲ್ಲಿ ಉಡುಪಿ ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಮನು ಪಟೇಲ್. ಬಿ. ವೈ, ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆಯ ಜಿಲ್ಲಾಧ್ಯಕ್ಷರಾದ ಅಬ್ದುಲ್ ಸಲಾಂ ಚಿತ್ತೂರು, ಡಯಟ್ ಪ್ರಾಂಶುಪಾಲರಾದ ಡಾ. ಅಶೋಕ್ ಕಾಮತ್, ಜಿಲ್ಲಾ ಘಟಕದ ಉಪಾಧ್ಯಕ್ಷರು ಹಾಗೂ ಉಡುಪಿ ತಾಲೂಕು ಘಟಕದ ಅಧ್ಯಕ್ಷರಾದ ಉಷಾ ರಮೇಶ್, ಸಮನ್ವಯ ವೇದಿಕೆಯ ಕಾರ್ಕಳ ತಾಲೂಕು ಘಟಕದ ಅಧ್ಯಕ್ಷರಾದ ವೀಣಾ ರಾಜೇಶ್ ಭಂಡಾರಿ, ಸಮನ್ವಯ ವೇದಿಕೆಯ ಕಾರ್ಯದರ್ಶಿ ವನಿತ. ವಿ ಆಚಾರ್, ಜೊತೆ ಕಾರ್ಯದರ್ಶಿ ಸದಾನಂದ ಸಾಲಿಯಾನ್, ಉಪಸ್ಥಿತರಿದ್ದರು.