

ಉಡುಪಿ, ಸೆ.28: ಸಮಾಜದ ವಿವಿಧ ವರ್ಗಗಳ ಜನರಿಗೆ ನೆರವು ನೀಡುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಉಡುಪಿ ಪರಿಶುದ್ಧ ಸೇವಾ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕೋತ್ಸವ ಸೆ.28 ರಂದು ಜರುಗಿತು.
ಸಭೆಯಲ್ಲಿ ಟ್ರಸ್ಟ್ನ ಸ್ಥಾಪಕ ಹಾಗೂ ವ್ಯವಸ್ಥಾಪಕ ಟ್ರಸ್ಟಿ ಅಲೆಕ್ಸ್ ರತನ್ ಅಂಚನ್ ಮಾತನಾಡಿ, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅಗತ್ಯವಿರುವವರಿಗೆ ಸಾಧ್ಯವಾದಷ್ಟು ನೆರವು ನೀಡುವುದು ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದ್ದು, ಮುಂದಿನ ದಿನಗಳಲ್ಲಿ ಸಾರ್ವಜನಿಕರು, ದಾನಿಗಳು, ಸಂಸ್ಥೆಗಳು ಹಾಗೂ ಸ್ವಯಂಸೇವಕರ ಸಹಕಾರದೊಂದಿಗೆ ಸೇವಾ ಕಾರ್ಯಗಳನ್ನು ಇನ್ನಷ್ಟು ವಿಸ್ತರಿಸುವುದಾಗಿ ತಿಳಿಸಿದರು.
ಶಿಕ್ಷಣ, ಆರೋಗ್ಯ, ಪರಿಸರ ಸಂರಕ್ಷಣೆ ಹಾಗೂ ಅನಾಥರು ಮತ್ತು ವೃದ್ಧರ ಕಲ್ಯಾಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವಾ ಚಟುವಟಿಕೆಗಳನ್ನು ಕೈಗೊಳ್ಳುವ ಉದ್ದೇಶದಿಂದ ಟ್ರಸ್ಟ್ ಕಾರ್ಯನಿರ್ವಹಿಸುತ್ತಿದ್ದು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳ ನೆರವು ನೀಡುತ್ತಿದೆ.ಅಷ್ಟೇ ಅಲ್ಲದೆ ಆರೋಗ್ಯ ಸಂಬAಧಿತ ಸೇವಾ ಚಟುವಟಿಕೆಗಳು, ಪರಿಸರ ಸಂರಕ್ಷಣೆಯ ಭಾಗವಾಗಿ ಸಸಿ ನೆಡುವ ಕಾರ್ಯಕ್ರಮಗಳು ಹಾಗೂ ವೃದ್ಧರು ಮತ್ತು ಅಸಹಾಯಕರಿಗೆ ಅಗತ್ಯ ನೆರವು ನೀಡುವ ಉದ್ದೇಶ ಹೊಂದಿದೆ. ಟ್ರಸ್ಟ್ನ ಮುಂದಿನ ಅವಧಿಯಲ್ಲಿ ಇನ್ನಷ್ಟು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು, ಆರೋಗ್ಯ ಶಿಬಿರಗಳು, ಪರಿಸರ ಸಂರಕ್ಷಣಾ ಕಾರ್ಯಕ್ರಮಗಳು ಹಾಗೂ ಸಮಾಜದ ಅಗತ್ಯವಿರುವ ವರ್ಗಗಳಿಗೆ ವಿವಿಧ ರೀತಿಯ ನೆರವು ಒದಗಿಸುವ ಯೋಜನೆಗಳನ್ನು ರೂಪಿಸಲಾಗಿದೆ.






.
.
.
.
.
.
.
.
.
.
.
.
.
.
.
.
.
.
.
.
