ಉಡುಪಿ: ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿಯೂ ಗಣನೀಯವಾಗಿ ಸಾಧನೆಗೈಯಲು ಪ್ರೋತ್ಸಾಹ ನೀಡುತ್ತಾ ಈಗಾಗಲೇ ಉಡುಪಿ ಜಿಲ್ಲೆಯಲ್ಲಿ ಮನೆಮಾತಾಗಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ನಿಜವಾಗಿಯೂ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಅತ್ಯಮೂಲ್ಯ ಕೊಡುಗೆ ಕೊಡುತ್ತಿದೆ. ಇಂತಹ ಸಂಸ್ಕಾರಯುತ ಶಿಕ್ಷಣ ಪಡೆದ ವಿದ್ಯಾರ್ಥಿ ಸಮೂಹ ದೇಶದ ಬಲವರ್ದನೆಗೆ ದುಡಿಯಬೇಕು ಎಂದು ಎನ್.ಎಸ್.ಎಸ್. ಮಾಜಿ ರಾಜ್ಯ ಸಂಯೋಜನಾಧಿಕಾರಿಗಳು, ನಿವೃತ್ತಪ್ರಾಂಶುಪಾಲರಾಗಿರುವ ಡಾ.ಗಣನಾಥ ಎಕ್ಕಾರು ಹೇಳಿದರು.
ಅವರು ಉಡುಪಿ ಜ್ಞಾನಸುಧಾ ಮತ್ತು ಮಣಿಪಾಲ ಜ್ಞಾನಸುಧಾ ಜಂಟಿ ಕಾಲೇಜು ವಾರ್ಷಿಕೋತ್ಸವ ಜ್ಞಾನಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇಲ್ಲಿನ ವೈದ್ಯಕೀಯ ಅಧೀಕ್ಷಕರಾದ ಡಾ.ಅವಿನಾಶ್ ಶೆಟ್ಟಿ ಮಾತನಾಡಿ, ದೇಶವನ್ನು ಬಲಗೊಳಿಸಲು ಉತ್ತಮ ಶಿಕ್ಷಣ ಮತ್ತು ಉತ್ತಮ ಆರೋಗ್ಯ ಮುಖ್ಯ. ನಾವು ಜವಾಬ್ದಾರಿಯುತ ನಾಗರಿಕರಾಗಿ ಹುಟ್ಟಿದ ನಾಡಿಗೆ ಕೊಡುಗೆ ಕೊಡುವಂತಾಗಬೇಕು. ಡಾ.ಸುಧಾಕರ ಶೆಟ್ಟಿಯವರು ಉತ್ತಮ ಶಿಕ್ಷಣ ತಜ್ಞರಾಗಿ ಶೈಕ್ಷಣಿಕ ಕ್ಷೇತ್ರಕ್ಕೆ ಬಹುಮುಖ್ಯ ಕೊಡುಗೆ ನೀಡುತ್ತ ಬಂದಿರುವುದು ಶ್ಲಾಘನೀಯ ಎಂದರು.
ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಗಣ್ಯರ ಆದರ್ಶ ಹಾಗೂ ಕಾಯಕವನ್ನೇ ಕೈಲಾಸವಾಗಿಸಿಕೊಂಡ ಅವರ ಜೀವನ ಮೌಲ್ಯಗಳು ನಮಗೆ ಅನುಕರಣೀಯ ಎಂದರು.
ಇದೇ ಸಂದರ್ಭದಲ್ಲಿ ಚೆಸ್‌ನಲ್ಲಿ ರಾಷ್ಟçಮಟ್ಟದ ಪಂದ್ಯಾವಳಿಯಲ್ಲಿಭಾಗವಹಿಸಿದ ಉಡುಪಿ ಜ್ಞಾನಸುಧಾ ವಿದ್ಯಾರ್ಥಿ ನಿಖಿಲ್ ವಿಕ್ರಮ್ ಅವರನ್ನು ಸನ್ಮಾನಿಸಲಾಯಿತು. ರಾಜ್ಯ ಮಟ್ಟದ ಕ್ರೀಡಾ ಪ್ರತಿಭೆಗಳನ್ನು, ವಿವಿಧ
ಸ್ಪರ್ಧೆಗಳಲ್ಲಿ ವಿಜೇತರನ್ನು ಸನ್ಮಾನಿಸಲಾಯಿತು.
ಮಣಿಪಾಲ್ ಟ್ರಸ್ಟ್ನ ಕರೆಸ್ಪೋಂಡೆAಟ್ ಪ್ರಕಾಶ್ ಶೆಟ್ಟಿ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಾರ್ಕಳ ಜ್ಞಾನಸುಧಾ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ದಿನೇಶ್ ಎಂ ಕೊಡವೂರು, ಉಡುಪಿ ಜ್ಞಾನಸುಧಾ ಪ.ಪೂ ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರಕಾಶ್ ಜೋಗಿ, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಭಂಡಿ ವೇದಿಕೆಯಲ್ಲಿದ್ದರು. ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಟ್ರಸ್ಟಿಗಳಾದ ವಿದ್ಯಾವತಿ ಎಸ್ ಶೆಟ್ಟಿ, ಕಾರ್ಕಳ ಜ್ಞಾನಸುಧಾ ಪ್ರೌಢ ಶಾಲೆಯ ಉಪಪ್ರಾಂಶುಪಾಲರಾದ ವಾಣಿ ಕೆ, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಡೀನ್ ಅಕಾಡೆಮಿಕ್ಸ್ ಡಾ.ಮಿಥುನ್ ಯು, ಡಾ.ಅವಿನಾಶ್ ಶೆಟ್ಟಿ, ವೈದ್ಯಕೀಯ ಅಧೀಕ್ಷಕರು ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ ಮತ್ತು ಪ್ರಾಧ್ಯಾಪಕರು ಸಮುದಾಯ ಔಷಧ ಕೇಂದ್ರ, ಡಾ. ಗಣಪತಿ ಎಕ್ಕಾರ್ ನಿವೃತ್ತ ಎನ್.ಎಸ್.ಎಸ್. ಅಧಿಕಾರಿಗಳು ಮತ್ತು ಮಾಜಿ ಜಂಟಿ ಕಾರ್ಯದರ್ಶಿಗಳು ಕರ್ನಾಟಕ ಸರ್ಕಾರ, ಅನಿಲ್ ಕುಮಾರ್ ಜೈನ್, ಸಿ.ಎ.ನಿತ್ಯಾನಂದ ಪ್ರಭು, ಉಡುಪಿ ಜ್ಞಾನಸುಧಾ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಸಂತೋ಼ಷ್, ಮಣಿಪಾಲ ಜ್ಞಾನಸುಧಾ ಪ.ಪೂ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಡೀನ್ ಅಕಾಡೆಮಿಕ್ಸ್ ಡಾ.ಮಿಥುನ್ ಯು ಮುಂತಾದವರು ಉಪಸ್ಥಿತರಿದ್ದರು.
ಉಡುಪಿ ಜ್ಞಾನಸುಧಾ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಸಂತೋ಼ಷ್ ಸ್ವಾಗತಿಸಿ, ಮಣಿಪಾಲ ಜ್ಞಾನಸುಧಾ ಪ.ಪೂ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ್ ಶೆಟ್ಟಿ ವಂದಿಸಿದರು. ಮಣಿಪಾಲ ಜ್ಞಾನಸುಧಾದ ಆಂಗ್ಲ ಭಾಷಾ ಉಪನ್ಯಾಸಕಿ ಶಮಿತಾ ಕಾರ್ಯಕ್ರಮ ನಿರೂಪಿಸಿದರು.
ಕಾರ್ಕಳ:ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕುಖ್ಯಾತ ನಕ್ಸಲ್ ವಿಕ್ರಂ ಗೌಡನನ್ನು ಎನ್’ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಪೊಲೀಸರ ಕಾರ್ಯಶೈಲಿ ಶ್ಲಾಘನೀಯ. ಜೀವದ ಹಂಗು ತೊರೆದು ದೇಶ ವಿರೋಧಿ ಶಕ್ತಿಗಳನ್ನು ಯಾವುದೇ ಮುಲಾಜಿಗೆ ಒಳಗಾಗದೇ ಹತ್ತಿಕ್ಕಿದ ANF ಪೊಲೀಸರ ಕಾರ್ಯವೈಖರಿ ಅಭಿನಂದನೀಯ ಎಂದು ಕಾರ್ಕಳ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ.
ಆದರೆ ಈ ಘಟನೆಯ ಬಳಿಕ ಕೆಲವು ಪ್ರಶ್ನೆಗಳು ಉದ್ಭವಿಸಿವೆ. ರಾಜ್ಯದಲ್ಲಿ ಈ ಹಿಂದೆ ಸ್ಥಗಿತಗೊಂಡಿದ್ದ ನಕ್ಸಲ್ ಚಟುವಟಿಕೆ ಇದೀಗ ಹದಿನೈದು ವರ್ಷಗಳ ಬಳಿಕ ಮತ್ತೆ ಕಾಣಿಸಿಕೊಂಡಿದ್ದು,ನಕ್ಸಲರು ಬಹಿರಂಗವಾಗಿ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು ? ಅಥವಾ ಕಾರಣ ಯಾರು ?
ರಾಜ್ಯ ಸರ್ಕಾರ, ಅದರಲ್ಲೂ ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಗರ ನಕ್ಸಲರ ಬಗ್ಗೆ ತೋರುತ್ತಿರುವ ವಿಶೇಷ ಪ್ರೀತಿ ಇದಕ್ಕೆ ಪ್ರೇರಣೆಯಲ್ಲವೇ ?
ಸ್ಥಳೀಯ ಜನಪ್ರತಿನಿಧಿಗಳು ಅಭಿವೃದ್ಧಿ ವಿಚಾರದಲ್ಲಿ ತೋರಿದ ವಿಶೇಷ ಆಸಕ್ತಿಯಿಂದ ಸ್ಥಳೀಯರು ನಕ್ಸಲ್ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸ್ಥಳೀಯರ ಬೆಂಬಲವಿಲ್ಲದೇ ಅಳಿದು ಹೋಗುವ ಹಂತಕ್ಕೆ ತಲುಪಿದ್ದ ನಕ್ಸಲ್ ಚಟುವಟಿಕೆ ಇದೀಗ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮತ್ತೆ ತಲೆ ಎತ್ತಿದೆ.
ಸಿದ್ದರಾಮಯ್ಯನವರೇ ದೇಶವಿರೋಧಿ ಹಾಗೂ ಬುಡಮೇಲು ಕೃತ್ಯಕ್ಕೆ ನೆರವಾಗುವವರಿಗೆ ಆದರ್ಶದ ನೆಪದಲ್ಲಿ ಬೆಂಬಲ ರಕ್ಷಣೆ ಬೇಡ. ಇದು ಪಶ್ಚಿಮಘಟ್ಟ ಜನರ ಶಾಂತಿ- ನೆಮ್ಮದಿ ಕೆಡಿಸಲಿದೆ. ಹೀಗಾಗಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ಇನ್ನಷ್ಟು ಬಲಗೊಳಿಸಿ. ಎ ಎನ್ಎಫ್ ಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ. ನಕ್ಸಲ್ ಚಟುವಟಿಕೆ ಹತ್ತಿಕ್ಕಿ ಜತೆಗೆ ಪಶ್ಚಿಮಘಟ್ಟ ಭಾಗದಲ್ಲಿ ಅಭಿವೃದ್ಧಿ ಕಾರ್ಯವನ್ನೂ ಚುರುಕುಗೊಳಿಸಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ
ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನೆಲಸಮಗೊಳಿಸಿ ಅಲ್ಲೇ ಮಸೀದಿಯನ್ನು ಮತ್ತೆ ಕಟ್ಟುತ್ತೇವೆ ಎಂದು ಬಾಂಗ್ಲಾದೇಶಿ ಇಸ್ಲಾಮಿಸ್ಟ್ ಉಗ್ರ ಸಂಘಟನೆ ಪ್ರತಿಜ್ಞೆ ಮಾಡುವ ಮೂಲಕ ಭಾರತದ ವಿರುದ್ಧ ಬಹಿರಂಗ ಬೆದರಿಕೆ ಹಾಕಿದೆ.
ನಾವು ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಕೆಲಸ ಮಾಡುತ್ತಿದ್ದೇವೆ. ಇಸ್ಲಾಮಿಕ್ ಯುವಕರೇ, ನಿಮ್ಮ ಬಳಿ ಏನಿದೆಯೋ ಅದರೊಂದಿಗೆ ಸಿದ್ಧರಾಗಿರಿ, ಏಕೆಂದರೆ ಭಾರತದ ಮೇಲೆ ದಾಳಿ ಮಾಡಬೇಕು.ನಾವು ರಾಮ ಮಂದಿರವನ್ನು ನೆಲಸಮಗೊಳಿಸಿ ಮತ್ತೆ ಮಸೀದಿಯನ್ನು ನಿರ್ಮಿಸುತ್ತೇವೆ. ನರೇಂದ್ರ ಮೋದಿ ಅವರ ಎರಡೂ ಕೆನ್ನೆಗಳಿಗೆ ಶೂಗಳಿಂದ ಹೊಡೆಯುತ್ತೇನೆ. ಆಟವನ್ನು ಅವರೊಂದಿಗೆ ಆಡುತ್ತೇವೆ, ನಾವು ಸಿದ್ಧರಿದ್ದೇವೆ” ಎಂದು ತೀವ್ರಗಾಮಿ ಬಾಂಗ್ಲಾದೇಶಿ ಇಸ್ಲಾಮಿಸ್ಟ್ ವಿಡಿಯೋದಲ್ಲಿ ಘೋಷಿಸಿದ್ದಾನೆ.
ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂ ಸಮುದಾಯದ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ಈ ವೀಡಿಯೊ ಬಂದಿದೆ. ಇತ್ತೀಚಿನ ವಾರಗಳಲ್ಲಿ ಹಿಂದೂ ಮನೆಗಳು, ವ್ಯವಹಾರಗಳು ಮತ್ತು ಧಾರ್ಮಿಕ ಸ್ಥಳಗಳ ಮೇಲೆ ದಾಳಿಗಳು ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಮಾನವ ಹಕ್ಕುಗಳ ಸಂಘಟನೆಗಳಲ್ಲಿ ಎಚ್ಚರಿಕೆಯನ್ನು ಹೆಚ್ಚಿಸಿದೆ.