

ಉಡುಪಿ ಜ್ಞಾನಸುಧಾ : ಚೆಸ್‌ನಲ್ಲಿ ರಾಜ್ಯಮಟ್ಟಕ್ಕೆ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ರಾಷ್ಟ್ರೋತ್ಥಾನ ಪದವಿ ಪೂರ್ವ ಕಾಲೇಜು, ಚೇರ್ಕಾಡಿ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ಯ ಎಸ್ ಹೇಮಂತ್ ಬಾಲಾಜಿ ತೃತೀಯ ಸ್ಥಾನ, ದ್ವಿತೀಯ ಪಿ.ಯು.ಸಿ.ಯ ಮಹಿನ್ ಕೆ ಐದನೇ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ, ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.


