ಉಡುಪಿ: ಕಾಪು ತಾಲೂಕಿನ ಬೆಳಪುವಿನಲ್ಲಿ ನಡೆದಿದ್ದ ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಸಂಬAಧಿಸಿದAತೆ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಪುತ್ರ ಪ್ರಜ್ವಲ್ ಶೆಟ್ಟಿಯನ್ನು ಪೊಲೀಸರು ಬಂಧಿಸಿ, ಠಾಣೆ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ.
ನವೆಂಬರ್. 11 ರಂದು ಮುಂಜಾನೆ 5 ಗಂಟೆ ಸುಮಾರಿಗೆ ಬೆಳಪುವಿನ ಮಿಲಿಟರಿ ಕಾಲನಿಯಲ್ಲಿ ಪ್ರಜ್ವಲ್ ಶೆಟ್ಟಿ ಹಿಟ್ ಆ್ಯಂಡ್ ನಡೆಸಿ ಪರಾರಿಯಾಗಿದ್ದ. ಅಪಘಾತದಲ್ಲಿ ಮೊಹಮ್ಮದ್ ಹುಸೈನ್ (39) ಎಂಬುವರು ಮೃತಪಟ್ಟಿದ್ದರು. ಪ್ರಜ್ವಲ್ ಶೆಟ್ಟಿ ತನ್ನ ಥಾರ್ ಜೀಪಿನಿಂದ ಮೊಹಮ್ಮದ್ ಹುಸೈನ್ ಅವರ ಬೈಕ್ ಗೆ ಗುದ್ದಿ ಪರಾರಿಯಾಗಿದ್ದ. ಅಪಘಾತದ ಭೀಕರತೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಿಸಿಟಿವಿ ದೃಶ್ಯಾವಳಿ ಆಧರಿಸಿ ಶಿರ್ವ ಪೊಲೀಸರು ಆರೋಪಿ ಪ್ರಜ್ವಲ್ ಶೆಟ್ಟಿಯನ್ನು ಬಂಧಿಸಿದ್ದರು.
ವಿಚಾರಣೆ ವೇಳೆ ಆರೋಪಿ ಪ್ರಜ್ವಲ್ ಶೆಟ್ಟಿ ನಿದ್ದೆ ಮಂಪರಿನಲ್ಲಿ ಅಪಘಾತ ನಡೆದಿದೆ ಎಂದು ಹೇಳಿದ್ದಾನೆ. ವಿಚಾರಣೆ ಬಳಿಕ, ಆರೋಪಿಯ ಥಾರ್ ಜೀಪ್ ವಶಪಡಿಸಿಕೊಂಡಿದ್ದು, ಆರೋಪಿ ಪ್ರಜ್ವಲ್ ಶೆಟ್ಟಿಯನ್ನು ಠಾಣೆಯ ಬೇಲ್ª ಮೇಲೆ ಬಿಡುಗಡೆ ಮಾಡಿದ್ದಾರೆ. ಕರೆದಾಗ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.