Share this news

ಉಡುಪಿ: ಒಳಕಾಡು ಶಾಲಾ ಕಟ್ಟಡದಲ್ಲೇ ಇದ್ದ ಜೇನುಗೂಡಿಗೆ ವಿದ್ಯಾರ್ಥಿಯೊಬ್ಬ ಕಲ್ಲೆಸೆದ ಪರಿಣಾಮ ವಿದ್ಯಾರ್ಥಿಗಳ ಮೇಲೆ ಜೇನು ನೊಣಗಳು ದಾಳಿ ನಡೆಸಿದ ಘಟನೆ ಮಂಗಳವಾರ ನಡೆದಿದೆ.
ಅಪರಾಹ್ನ ಸುಮಾರು 3.30ರ ವೇಳೆಗೆ ಈ ಘಟನೆ ನಡೆದಿದೆ. ಶಾಲಾ ವಿದ್ಯಾರ್ಥಿಯೊಬ್ಬ ಜೇನು ಗೂಡಿಗೆ ಕಲ್ಲು ಎಸೆದ ಸಂದರ್ಭ ನೊಣಗಳು ಚೆಲ್ಲಾಪಿಲ್ಲಿಯಾಗಿ ಶಾಲಾ ಆವರಣದಲ್ಲಿದ್ದ ಮಕ್ಕಳು ಹಾಗೂ ಪೋಷಕರ ಮೇಲೆ ದಾಳಿ ಮಾಡಿದೆ. 40 ವಿದ್ಯಾರ್ಥಿಗಳು ಸಹಿತ ಎಸ್‌ಡಿಎಂಸಿ ಸದಸ್ಯೆಯೊಬ್ಬರು ಗಾಯಗೊಂಡಿದ್ದಾರೆ.

ಗಾಯಗೊAಡ ವಿದ್ಯಾರ್ಥಿಗಳ ಪೈಕಿ 37 ವಿದ್ಯಾರ್ಥಿಗಳಿಗೆ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಸಂಜೆ ಮನೆಗೆ ತೆರಳಿದ್ದಾರೆ. ಉಳಿದ ಮೂವರು ವಿದ್ಯಾರ್ಥಿಗಳ ಮೈಯಲ್ಲಿ ತರಚಿದ ಗಾಯಗಳಾಗಿದ್ದು, ಅವರನ್ನು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡಿತಕ್ಕೊಳಗಾಗಿರುವ ಎಸ್‌ಡಿಎಂಸಿ ಸದಸ್ಯೆಯನ್ನು ಜಿಲ್ಲಾಸ್ಪತ್ರೆಯ ನಿಗಾ ಕೊಠಡಿಯಲ್ಲಿ ಇರಿಸಲಾಗಿದೆ ಎಂದು ಜಿಲ್ಲಾ ಸರ್ಜನ್ ಡಾ| ಅಶೋಕ್ ತಿಳಿಸಿದ್ದಾರೆ. ಡಿಡಿಪಿಐ ಕೆ. ಗಣಪತಿ, ನಗರಸಭೆ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಳ್ಳಲು ಸಹಕರಿಸಿದ್ದಾರೆ.

ಈ ಶಾಲೆಯಲ್ಲಿ 590 ಮಂದಿ ವಿದ್ಯಾರ್ಥಿಗಳಿದ್ದು, ಜೇನು ದಾಳಿ ಆರಂಭಿಸುತ್ತಿದ್ದAತೆಯೇ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸುವ ವ್ಯವಸ್ಥೆ ಮಾಡಲಾಯಿತು. ತರಗತಿ ಕೊಠಡಿಗಳ ಬಾಗಿಲು ಬಂದ್ ಮಾಡಿ ವಿದ್ಯಾರ್ಥಿಗಳು ಸಹಿತ ಶಿಕ್ಷಕರು ಜೇನು ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ. ಆದರೆ ಶಾಲಾ ಆವರಣದಲ್ಲಿದ್ದ ವಿದ್ಯಾರ್ಥಿಗಳು ಜೇನು ದಾಳಿಗೆ ಒಳಗಾದರು. ಕೂಡಲೇ ಎಸ್‌ಡಿಎಂಸಿ ಸದಸ್ಯರ ಸಹಿತ ಸ್ಥಳೀಯರ ಸಹಕಾರದೊಂದಿಗೆ ವಾಹನದಲ್ಲಿ ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು ಎಂದು ಶಾಲಾ ಮುಖ್ಯಶಿಕ್ಷಕಿ ಪೂರ್ಣಿಮಾ ತಿಳಿಸಿದ್ದಾರೆ. 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *