
ಉಡುಪಿ,ನ.15: ವಿದ್ಯಾರ್ಥಿ ಜೀವನ ಸುವರ್ಣ ಜೀವನ ಎನ್ನುವರು. ಇಲ್ಲಿ ಮಾಡಿದ ಸಣ್ಣ ಸಾಧನೆ ಕೂಡ ಮುಂದಿನ ದಿನಗಳಲ್ಲಿ ದೊಡ್ಡ ಸಾಧನೆಗೆ ದಾರಿಯಾಗುತ್ತದೆ. ಇಲ್ಲಿರುವ ದೈಹಿಕ ಶಿಕ್ಷಣ ನಿರ್ದೇಶಕರ ಸಲಹೆ ಸೂಚನೆಗಳೊಂದಿಗೆ ಕ್ರೀಡಾ ಸಾಧಕರಾಗಿ, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ನನ್ನ ಗುರುಗಳು. ನಾನು ಇಲ್ಲಿ ತನಕ ಬರಲು ಅವರೂ ಕಾರಣ ಎಂದು ಡಾ. ಎನ್.ಎಸ್.ಎ.ಎಮ್. ಪ್ರಥಮ ದರ್ಜೆ ಕಾಲೇಜು ನಿಟ್ಟೆಯ, ದೈಹಿಕ ಶಿಕ್ಷಣ ನಿರ್ದೇಶಕರಾಗಿರುವ ಡಾ. ನಿತಿನ್ ಹೇಳಿದರು.
ಇವರು ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಆಳ್ವಾಸ್ ಕ್ರೀಡಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಪ್ರದೀಪ್ ಎಸ್ ಇವರು ಮಾತನಾಡಿ, ಅದೃಷ್ಟದ ಹಿಂದೆ ಹೋಗದೆ ಪರಿಶ್ರಮದ ಹಿಂದೆ ಹೋದರೆ ಮಾತ್ರ ಯಶಸ್ಸು ಸಾಧ್ಯ, ತುಕ್ಕು ಹಿಡಿಯುವುದಕ್ಕಿಂತ ಸವೆದು ಹೋಗುವುದೇ ಲೇಸು ಎಂಬ ಮಾತನ್ನು ಅರಿತು ನಡೆಯಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ಕೊಟ್ಟರು. ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ
ವಿದ್ಯಾರ್ಥಿಗಳು ಆಯೋಜಿಸಿದ ಬಿಸ್ನೆಸ್ ಫೇರ್ನ್ನು ಈ ಸಂದರ್ಭದಲ್ಲಿ ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಮಣಿಪಾಲ ಜ್ಞಾನಸುಧಾದ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಉಡುಪಿ ಜ್ಞಾನಸುಧಾದ ಉಪಪ್ರಾಂಶುಪಾಲರಾದ ಪ್ರಕಾಶ್ ಜೋಗಿ ಉಪಸ್ಥಿತರಿದ್ದರು. ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀನಿಧಿ ಭಾಗವತ್ ಸ್ವಾಗತಿಸಿದರು. ಭೌತಶಾಸ್ತç ವಿಭಾಗದ ಉಪನ್ಯಾಸಕಿ ಶ್ರೀಮತಿ ಜೋತ್ಸಾö್ನ ಕಾರ್ಯಕ್ರಮ ನಿರೂಪಿಸಿದರು.





.
.
.
.
.
.
.
.
.
.
.
.
.
.
.
.
.
.
.
.
