Share this news

ಉಡುಪಿ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಇಸ್ಕಾನ್‌ ಮುಖಂಡರನ್ನು ಬಂಧಿಸಿರುವುದನ್ನು ಖಂಡಿಸಿ ಹಿಂದೂ ಹಿತರಕ್ಷಣ ಸಮಿತಿ ನೇತೃತ್ವದಲ್ಲಿ ಬುಧವಾರ ಉಡುಪಿಯಲ್ಲಿ ಬೃಹತ್‌ ಪ್ರತಿಭಟನಾ ಜಾಥಾ ನಡೆಯಿತು.

ಉಡುಪಿ ಜೋಡುಕಟ್ಟೆಯಲ್ಲಿ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಜಾಥಾಕ್ಕೆ ಚಾಲನೆ ನೀಡಿದರು

ಬಳಿಕ ಅಲ್ಲಿಂದ ಆರಂಭಗೊಂಡ ಜಾಥವು ಸರ್ವಿಸ್‌, ಸಿಟಿ ಬಸ್‌ ನಿಲ್ದಾಣ, ಕಲ್ಸಂಕ ಮಾರ್ಗವಾಗಿ ಸಾಗಿಬಂದು ಶ್ರೀ ಕೃಷ್ಣಮಠದ ಪಾರ್ಕಿಂಗ್‌ ಪ್ರದೇಶದಲ್ಲಿ ಸಮಾಪ್ತಿಗೊಂಡಿತು.

ಜಾಥಾದಲ್ಲಿ ಶಾಸಕರಾದ ಗುರುರಾಜ್‌ ಗಂಟಿಗೊಳೆ ಯಶ್ ಪಾಲ್ ಸುವರ್ಣ, ಸುರೇಶ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್, ಹಿಂದೂ ಸಂಘಟನೆಗಳ ಪ್ರಮುಖರಾದ ಸುನಿಲ್ ಕೆ. ಆರ್, ದಿನೇಶ್ ಮೆಂಡನ್, ಬಿಜೆಪಿಯ ಪ್ರಮುಖರಾದ ವೀಣಾ ಶೆಟ್ಟಿ, ಗೀತಾಂಜಲಿ ಸುವರ್ಣ ಸಾವಿರಾರು ಹಿಂದೂ‌ ಕಾರ್ಯಕರ್ತರು ಭಾಗವಹಿಸಿದರು.

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜಾಂಗಣ ಪಾರ್ಕಿಂಗ್ ಪ್ರದೇಶದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಭಾಷಣ ಮಾಡಿದರು. ಬಿಜೆಪಿ ಸಹಿತವಾಗಿ ವಿವಿಧ ಹಿಂದು ಸಂಘಟನೆಗಳು, ಉಡುಪಿ ಇಸ್ಕಾನ್‌ನ ಪ್ರಮುಖರು, ಭಕ್ತರು ಭಾಗವಹಿಸಿದ್ದರು‌.

 

Leave a Reply

Your email address will not be published. Required fields are marked *