Share this news

ಕಾರ್ಕಳ ಸೆ,09:ಶಿಕ್ಷಕ ಬಿ.ಜಿ.ರಾಮಕೃಷ್ಣ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಕೊಟ್ಟಿದ್ದನ್ನು ಮತೀಯವಾದಿಗಳ ಒತ್ತಡಕ್ಕೆ ಮಣಿದು ವಾಪಾಸ್ ತೆಗೆದುಕೊಂಡ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಪ್ರತಿಭಟಿಸಿದ ಹನ್ನೊಂದು ಜನ ಶಿಕ್ಷಕರ ವಿರುದ್ಧ ಎಫ್ ಐಆರ್ ದಾಖಲಿಸಲು ಸರ್ಕಾರ ಸೂಚನೆ ನೀಡಿರುವುದು ಅತ್ಯಂತ ಖಂಡನೀಯ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕುವ ಕೃತ್ಯ ಎಂದು ಕಾರ್ಕಳ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾಪ್ರಭುತ್ವದ ಮೌಲ್ಯ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ವೇದಾಂತ ಮಾತನಾಡುವ ಸಿದ್ದರಾಮಯ್ಯ ಆಡಿದ ಮಾತುಗಳೆಲ್ಲವೂ ಕೇವಲ ತೋರಿಕೆ. ಈ ಎಲ್ಲಾ ಮಾತುಗಳು ಪ್ರತಿಪಕ್ಷದಲ್ಲಿ ಇದ್ದಾಗ ಮಾತ್ರ ಅವರಿಗೆ ಸುಲಭವಾಗಿ ಲಭಿಸು ಅಧಿಕಾರದಲ್ಲಿ ಇದ್ದಾಗ ಸಿದ್ದರಾಮಯ್ಯನವರಿಗೆ ಒಂದು ಪ್ರತಿಭಟನೆಯನ್ನೂ ಸಹಿಸಲಾಗದಂಥ ನಿರಂಕುಶ ಮನಃಸ್ಥಿತಿ ಆವರಿಸುತ್ತದೆ ಎಂಬುದಕ್ಕೆ ಈ ಘಟನೆಯೊಂದು ಉದಾಹರಣೆಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ನಿಮ್ಮ ಸರ್ಕಾರ ಪ್ರತಿಭಟನೆ ನಡೆಸುವುದನ್ನೂ ಸಹಿಸದಷ್ಟು ಪ್ರಜಾಪ್ರಭುತ್ವ ವಿರೋಧಿ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಿಂದಲೂ ವಿಪಕ್ಷದ ಶಾಸಕರನ್ನು ಗುರಿಯಾಗಿಸಿಕೊಂಡು ನಡೆಸುತ್ತಿದ್ದ ದ್ವೇಷರಾಜಕಾರಣ ನಡೆಸಲಾಗುತ್ತಿತ್ತು. ಅದು ಈಗ ಮತ್ತೊಂದು ಮಜಲು ತಲುಪಿದೆ. ಈಗ ಹೋರಾಟಗಾರರನ್ನೂ ದಮನಿಸುವುದಕ್ಕೆ ಈ ಸರ್ಕಾರ ಮುಂದಾಗಿದೆ. ಸಿದ್ದರಾಮಯ್ಯನವರೇ ಅಧಿಕಾರ ಶಾಶ್ವತವಲ್ಲ ಎನ್ನುವುದನ್ನು ನೆನಪಿಡಿ, ದೌರ್ಜನ್ಯಕ್ಕೆ ಜನ ಬೆದರುವುದಿಲ್ಲ. ಜನತಾ ನ್ಯಾಯಾಲಯದಲ್ಲಿ ಸಾಕ್ಷಿ ನಾಶ ಸುಲಭವಲ್ಲ ಎಂಬುದು ನೆನಪಿರಲಿ ಎಂದು ಸುನಿಲ್‌ ಕುಮಾರ್ ಸರ್ಕಾರದ ನಿಲುವಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

 

    

                        

                          

                        

                       

Leave a Reply

Your email address will not be published. Required fields are marked *