
ಉಡುಪಿ,ನ,28 : ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅವರು ಈಗಾಗಲೇ ಉಡುಪಿಗೆ ಆಗಮಿಸಿದ್ದು,ಅವರನ್ನು ಅಷ್ಟಮಠದ ಶ್ರೀಗಳು ಸ್ವಾಗತಿಸಿದ್ದು, ಬಳಿಕ ಸ್ವರ್ಣಲೇಪಿತ ಕನಕನ ಕಿಂಡಿ ಉದ್ಘಾಟಿಸಿದ್ದಾರೆ. ಬಳಿಕ ನವಗ್ರಹ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ.
ಉಡುಪಿ ಕೃಷ್ಣಮಠದಲ್ಲಿ 1 ತಿಂಗಳ ಕಾಲ ಬೃಹತ್ ಗೀತೋತ್ಸವ ನಡೆಯಲಿದ್ದು, ಇಂದಿನಿAದ ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಭಕ್ತರಿಂದ ಲಕ್ಷ ಕಂಠ ಗೀತಾ ಉತ್ಸವ ಆಯೋಜನೆ ಮಾಡಲಾಗಿದೆ. 1 ಲಕ್ಷ ಭಕ್ತರ ಜೊತೆ ಶ್ಲೋಕ ಪಠಣ ಮಾಡಲಿದ್ದಾರೆ.ಈ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಿದ್ದು, ಮೋದಿಯವರು ಕೊನೆಯ 10 ಶ್ಲೋಕ ಪಠಿಸಲಿದ್ದಾರೆ. ಈಗಾಗಲೇ ಲಕ್ಷ ಕಂಠ ಗೀತಾ ಪಠಣ ಆರಂಭವಾಗಿದೆ.
ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
.
