Share this news

ಉಡುಪಿ: ಸಂಸದ ಕೋಟ ಶ್ರೀನಿವಾಸ ಪೂಜಾರಿಯವ ಅಧ್ಯಕ್ಷತೆಯಲ್ಲಿ ಅ.30ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಇಂದ್ರಾಳಿ ರೈಲ್ವೆ ಸೇತುವೆ, ರಾಹೆ 169 ಎ ಮಲ್ಪೆ ಹೆಬ್ರಿ ಆಗುಂಬೆ ರಾಷ್ಟ್ರೀಯ ಹೆದ್ದಾರಿ, ಸಾಸ್ತಾನ ಟೋಲ್ ಗೇಟ್, ಸರ್ವಿಸ್ ರಸ್ತೆ ಕಾಮಗಾರಿ, ಅಂಬಲಪಾಡಿ ಮತ್ತು ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಮೇಲ್ ಸೇತುವೆ ನಿರ್ಮಾಣ ಕಾಮಗಾರಿ ಬಗ್ಗೆ ಆರಂಭಿಕವಾಗಿ ವಿಸ್ತೃತವಾದ ಚರ್ಚೆ ನಡೆಯಿತು.

ಕೊನೆಯಲ್ಲಿ ರಾ.ಹೆ .169 ಸಾಣೂರು ಬಿಕನರ್ನ ಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಉಡುಪಿ ಜಿಲ್ಲೆ ,ಕಾರ್ಕಳ ತಾಲೂಕು ಸಾಣೂರು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಬಾಕಿ ಉಳಿದಿರುವ ಕಾಮಗಾರಿಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು.
ಸಂತೆಕಟ್ಟೆ ಅಂಡರ್ ಪಾಸ್,
ಈ ಸಂದರ್ಭದಲ್ಲಿ ಮಾನ್ಯ ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯರಾದ ಸಾಣೂರು ನರಸಿಂಹ ಕಾಮತ್ ರವರಿಗೆ, ಬಾಕಿ ಉಳಿದಿರುವ
ಕಾಮಗಾರಿಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದರು.

ತುರ್ತಾಗಿ ಆಗಬೇಕಾಗಿರುವ ಸಾಣೂರು ಯುವಕ ಮಂಡಲದ ಮೈದಾನದ ಬಳಿಯ ಹೈ ಟೆನ್ಶನ್ ಟವರ್ ಸಮೀಪ ಗುಡ್ಡ ಜರಿದಿರುವ ಭಾಗಕ್ಕೆ ತಡೆಗೋಡೆ ಕಾಮಗಾರಿಯನ್ನು ಇನ್ನೂ ಪ್ರಾರಂಭಿಸದೇ ಇರುವ ಬಗ್ಗೆ ತೀವ್ರವಾದ ಆಕ್ಷೇಪ ವ್ಯಕ್ತಪಡಿಸಿದರು.ಈ ಬಗ್ಗೆ ಸ್ಪಷ್ಟಿಕರಣ ನೀಡಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾಧಿಕಾರಿ ಮೊಹಮ್ಮದ್ ಅಜ್ಮಿಯವರು, ಕಳೆದ ಮೂರು ತಿಂಗಳಿನಿಂದ ನಿರಂತರ ಮಳೆ ಸುರಿಯುತ್ತಿರುವುದರಿಂದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗಿಲ್ಲ, ಇದೀಗ ಕಳೆದ ಒಂದು ವಾರದಿಂದ ಮಳೆ ಬಾರದೆ ಇರುವ ಕಾರಣ ಕಾಮಗಾರಿಯನ್ನು ತುರ್ತಾಗಿ ಪ್ರಾರಂಭಿಸಿ 20 ದಿನಗಳ ಒಳಗಾಗಿ ತಡೆಗೋಡೆ ನಿರ್ಮಾಣ ಕಾರ್ಯವನ್ನು ಆದ್ಯತೆಯ ಮೇರೆಗೆ ಮುಗಿಸಿಕೊಡುವುದಾಗಿ ಭರವಸೆ ನೀಡಿದರು.

ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿರುವ ನಾಲ್ಕು ಪ್ರಯಾಣಿಕರ ತಂಗುದಾಣಗಳನ್ನು ಹೆದ್ದಾರಿ ಇಲಾಖೆಯವರು ತೆರವುಗೊಳಿಸಿದ್ದು, ಪ್ರಯಾಣಿಕರು ಬಸ್ಸಿಗಾಗಿ ಬಿಸಿಲು ಮಳೆಗಾಳಿಗೆ ರಸ್ತೆಯ ಮಧ್ಯದಲ್ಲಿ ಕಾಯಬೇಕಾದ ದಯನೀಯ ಪರಿಸ್ಥಿತಿಯ ಬಗ್ಗೆ ಗಮನ ಸೆಳೆದು, ಕನಿಷ್ಠಪಕ್ಷ ತಾತ್ಕಾಲಿಕ ತಂಗುಧಾನದ ನಿರ್ಮಾಣ ಮಾಡಿಕೊಡಬೇಕೆಂದು ಆಗ್ರಹಿಸಿದರು.

ಈಗಾಗಲೇ ಸಾಣೂರಿನ ರಿಕ್ಷಾ ಮಾಲಕ ಮತ್ತು ಚಾಲಕರು ನೆರಳಿನ ಬಲೆ ಮತ್ತು ಮರದ ಕಂಬಗಳನ್ನು ಬಳಸಿ, ಪ್ರಯಾಣಿಕರ ಅನುಕೂಲಕ್ಕಾಗಿ ಶ್ರಮದಾನದ ಮೂಲಕ ತಾತ್ಕಾಲಿಕ ಬಸ್ಸು ತಂಗುದಾಣವನ್ನು ನಿರ್ಮಾಣ ಮಾಡಿರುವ ಬಗ್ಗೆ ಸಭೆಯ ಗಮನಕ್ಕೆ ತಂದರು.

ಹೊಸ ತಂಗುದಾಣಗಳನ್ನು ಮಾಡಲು ಈಗಾಗಲೇ ವಿನ್ಯಾಸವನ್ನು ರಚಿಸಲಾಗಿದ್ದು ಹೆದ್ದಾರಿ ಕಾಮಗಾರಿ ಪೂರ್ಣವಾದ ಬಳಿಕ ಪ್ರಯಾಣಿಕರ ತಂಗುದಾಣದ ಕೆಲಸ ಪ್ರಾರಂಭಿಸುವುದಾಗಿ ತಿಳಿಸಿದರು.

ಸಾಣೂರು ಪುಲ್ಕೇರಿ ಬೈಪಾಸ್ ವೃತ್ತದ ಬಳಿ ಇಂದಿರಾನಗರಕ್ಕೆ ಹೋಗುವ ರಸ್ತೆಯ ಪರಿಸರದಲ್ಲಿ ಕಟ್ಟಡವನ್ನು ಕೆಡವಿದ ಮಣ್ಣು ತುಂಬಿ ಹೋಗಿದ್ದು, ಇಂದಿರಾ ನಗರ ರಸ್ತೆಯ ಆರಂಭದಲ್ಲಿ ತಾತ್ಕಾಲಿಕವಾಗಿ ಮೋರಿ ಪೈಪ್ ಹಾಕಲಾಗಿದ್ದು, ಕಳೆದ ವಾರ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಶಾಲಾ ವಾಹನ ಹೊಂಡಕ್ಕೆ ಬಿದ್ದು ಅದೃಷ್ಟವಶಾತ್ ಜೀವಾಪಾಯದಿಂದ ಪಾರಾಗಿರುವ ಬಗ್ಗೆ ಸಭೆಯ ಗಮನಕ್ಕೆ ತರಲಾಯಿತು.
ಸಾಣೂರು ಬೈಪಾಸ್ ಸರ್ಕಲ್ ನಿಂದ ಅವಿನಾಶ್ ನಿವಾಸದವರೆಗೆ ಹಾಗೂ ಸಾಣೂರು ಮಾರಿಗುಡಿಯಿಂದ ಸಾಣೂರು ಯುವಕ ಮಂಡಲದ ವರೆಗೆ ಸುಮಾರು 1.6 ಕಿ.ಮೀ ಹೆದ್ದಾರಿಯ ಎರಡು ಬದಿ ಸರ್ವಿಸ್ ರಸ್ತೆ ನಿರ್ಮಾಣ ಮಾಡುವ ಬಗ್ಗೆ ಕಳೆದೆರಡು ವರ್ಷಗಳಿಂದ ಮಾನ್ಯ ಶಾಸಕರಿಗೆ ಜಿಲ್ಲಾಧಿಕಾರಿಯವರಿಗೆ ಹಾಗೂ ಸಂಸದರಿಗೆ ಮನವಿಯನ್ನು ಸಲ್ಲಿಸಿದ್ದರು ಈ ಬಗ್ಗೆ ಇನ್ನೂ ಪ್ರಸ್ತಾವನೆ ಸಲ್ಲಿಸಿದರುವ ಬಗ್ಗೆ ಸಾಣೂರು ನರಸಿಂಹ ಕಾಮತ್ ರವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಈಗಾಗಲೇ ಪ್ರಸ್ತಾವಿತ ರಾಷ್ಟ್ರೀಯ ಹೆದ್ದಾರಿಯ ಅಂದಾಜು ವೆಚ್ಚ ಬಹಳಷ್ಟು ಹೆಚ್ಚಾಗಿದ್ದು, ಸರ್ವಿಸ್ ರಸ್ತೆಯನ್ನು ಕಾಮಗಾರಿಯಲ್ಲಿ ಕೈಬಿಟ್ಟಿರುವುದಾಗಿ ತಿಳಿಸಿದರು.ರಸ್ತೆ ಸುರಕ್ಷತೆಯ ದೃಷ್ಟಿಯಿಂದ, ಗ್ರಾಮದ ವಿವಿಧ ಅಡ್ಡ ರಸ್ತೆಗಳಿಂದ ಜನರು ತಮ್ಮ ವಾಹನದ ಮೂಲಕ ನೇರವಾಗಿ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುವುದರಿಂದ ಈಗಾಗಲೇ ಹಲವಾರು ಅಪಘಾತಗಳು ನಡೆದಿರುವ ಕುರಿತು ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಸಾಣೂರು ನರಸಿಂಹ ಕಾಮತ್ ವಿವರಿಸಿದರು.

ಸುರಕ್ಷತಾ ದೃಷ್ಟಿಯಿಂದ ಈ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಕಲೆಹಾಕಿ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಪ್ರಸ್ತಾವನೆಯನ್ನು ಕಳುಹಿಸುವುದಾಗಿ ಸಂಸದರಾದ ಕೋಟ ಶ್ರೀನಿವಾಸ್ *ಪೂಜಾರಿಯವರು ತಿಳಿಸಿದರು.
ಸಭೆಯಲ್ಲಿ ಕುಂದಾಪುರ ಶಾಸಕ ಕಿರಣ್ ಕೊಡ್ಗಿ, ಉಡುಪಿ ಶಾಸಕ ಯಶಪಾಲ ಸುವರ್ಣ,ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ, ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್.ಕೆ ಮುಂತಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಹೆದ್ದಾರಿ ಹೋರಾಟ ಸಮಿತಿಯ ಪ್ರಮುಖರಾದ ಬೆಳುವಾಯಿ ರತ್ನಾಕರ ಶೆಟ್ಟಿ ಉಪಸ್ಥಿತರಿದ್ದರು.

 

 

 

 

Leave a Reply

Your email address will not be published. Required fields are marked *