ಉಡುಪಿ : ಬೀಡಿ ಕಾರ್ಮಿಕರ ಕನಿಷ್ಟ ವೇತನ ಹಾಗೂ ತುಟ್ಟಿಭತ್ಯೆಯನ್ನು ಕಡಿತ ಗೊಳಿಸಿದ ಸರಕಾರದ ಕ್ರಮವನ್ನು ಖಂಡಿಸಿ ಆದೇಶ ವಾಪಾಸ್ಸಾತಿಗೆ ಒತ್ತಾಯಿಸಿ ಇಂದು ಬೀಡಿ & ಟೋಬ್ಯಾಕೋ ಲೇಬರ್ ಯೂನಿಯನ್ ನೇತ್ರತ್ವದಲ್ಲಿ ಉಡುಪಿಯ ತಹಶಿಲ್ದಾರರ ಕಛೇರಿ ಮುಂದೆ ಸರಕಾರದ ಆದೇಶ ಪ್ರತಿ ಸುಟ್ಟು ಹಾಕಿ ನಂತರ ಮುಖ್ಯಮಂತ್ರಿಯವರಿಗೆ ಹಾಗೂ ಕಾರ್ಮಿಕ ಸಚಿವರಿಗೆ ಮನವಿ ನೀಡಲಾಯಿತು.
ಪ್ರತಿಭಟನಾ ಸಭೆಯಲ್ಲಿ ಬೀಡಿ ಎಂಡ್ ಟೋಬ್ಯಾಕೋ ಲೇಬರ್ ಯೂನಿಯನ್ ಅಧ್ಯಕ್ಷರಾದ ನಳಿನಿ ಎಸ್., ಪ್ರಧಾನ ಕಾರ್ಯದರ್ಶಿ ಉಮೇಶ್ ಕುಂದರ್, ಅಖಿಲ ಭಾರತ ಬೀಡಿ ಫೆಡರೇಶನ್ ಯೂನಿಯನ್ ಕೇಂದ್ರ ಸಮಿತಿ(ದೆಹಲಿ) ಸದಸ್ಯರಾದ ಕವಿರಾಜ್ .ಎಸ್.ಕಾಂಚನ್ ,ಸಿಐಟಿಯು ಉಡುಪಿ ಜಿಲ್ಲಾ ಕೋಶಾಧಿಕಾರಿ ಶಶಿಧರ ಗೋಲ್ಲ, ಸಮಿತಿ ಸದಸ್ಯರಾದ ಗಿರಿಜ, ವಸಂತಿ, ಶಾರದ ಉಪಸ್ಥಿತರಿದ್ದರು.