Share this news

ಉಡುಪಿ : 5 ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿ ನಗರದಲ್ಲಿ ನಡೆದಿದೆ.

ಸುಮಾರು 30 ವರ್ಷದ ಯುವಕ ಈ ಕೃತ್ಯ ಎಸಗಿದ್ದು, ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ನೀಡಿದ್ದಾರೆ.

ಅಪಘಾತದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಘಟನೆಯ ಮಾಹಿತಿ ಬಂದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜೊತೆ ಮಾತನಾಡಿ ಘಟನೆಯ ವಿವರ ಪಡೆದಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯನ್ನು ತಕ್ಷಣ ಪತ್ತೆ ಹಚ್ಚಬೇಕು. ಜೊತೆಗೆ, ಬಾಲಕಿಗೆ ಅಗತ್ಯವಾದ ಎಲ್ಲ ನೆರವನ್ನು ನೀಡಬೇಕು ಎಂದು ಸಚಿವರು ಜಿಲ್ಲಾಧಿಕಾರಿ ಹಾಗೂ ಎಸ್ಪಿಗೆ ಸೂಚನೆ ನೀಡಿದ್ದಾರೆ.

ಬಾಲಕಿಯ ಲೈಂಗಿಕ ಕಿರುಕುಳ ಪ್ರಕರಣದ ಶಂಕಿತ ಆರೋಪಿಯ ಫೋಟೋ ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದ್ದು, ಈತನ ಬಗ್ಗೆ ಸಾರ್ವಜನಿಕರು ಯಾವುದೇ ಮಾಹಿತಿಯಿದ್ದಲ್ಲಿ ಉಡುಪಿ ಮಹಿಳಾ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ. ಕಂಟ್ರೋಲ್ ರೂಮ್ : 9480805400 ಪೊಲೀಸ್ ನಿರೀಕ್ಷಕರು, ಮಹಿಳಾ ಠಾಣೆ : 9480805430 ಮಹಿಳಾ ಠಾಣೆ : 08202525599 ಪೊಲೀಸ್ ಉಪನಿರೀಕ್ಷಕರು, ಮಹಿಳಾ ಠಾಣೆ : 8277988949 ನ್ನು ಸಂಪರ್ಕಿಸಬಹುದು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *