
ಕಾರ್ಕಳ, ನ.04: ದಿ.ಉಡುಪಿ ತೆರಿಗೆ ಪಾವತಿದಾರರ ಹಾಗೂ ತೆರಿಗೆ ಉಳಿತಾಯಗಾರರ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ.ಲಿ, ಇದರ ಶಾಖೆಯ ನೂತನ ಕಚೇರಿಯು ನಾಳೆ (ನ.05ರಂದು)ಕಾರ್ಕಳದ ಸ್ಟೇಟ್ ಬ್ಯಾಂಕ್ ಬಳಿಯ ಶ್ರೀಕೃಷ್ಣ ಟವರ‍್ಸ್ ನಲ್ಲಿ ಶುಭಾರಂಭಗೊಳ್ಳಲಿದೆ.
ಸಂಜೆ 4 ಗಂಟೆಗೆ ಗಣ್ಯರ ಉಪಸ್ಥಿತಿಯಲ್ಲಿ ನೂತನ ಶಾಖೆಯು ಉದ್ಘಾಟನೆಗೊಳ್ಳಲಿದೆ. ಗ್ರಾಹಕರಿಗೆ ಗುಣಮಟ್ಟದ ಹಾಗೂ ನಗುಮೊಗದ ಸೇವೆ ನೀಡುವ ಗುರಿಯೊಂದಿಗೆ ನೂತನ ಸಂಸ್ಥೆ ಶುಭಾರಂಭಗೊಳ್ಳಲಿದ್ದು, ಗ್ರಾಹಕರಿಗೆ ರಿಯಾಯಿತಿ ಬಡ್ಡಿದರದಲ್ಲಿ ವಾಹನ ಸಾಲ, ಚಿನ್ನಾಭರಣ ಸಾಲ, ಪರ್ಸನಲ್ ಲೋನ್ ಸೇರಿದಂತೆ ವಿವಿಧ ಸಾಲ ಸೌಲಭ್ಯ ಹಾಗೂ ಎಲ್ಲಾ ಠೇವಣಿಗಳಿಗೆ ಆಕರ್ಷಕ ಬಡ್ಡಿದರ ನೀಡಲಾಗುವುದು ಎಂದು ಶಾಖೆಯ ಮ್ಯಾನೇಜರ್ ವಿಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


