ಉಡುಪಿ : ಬೈಲಕೆರೆ ವಿದ್ಯೋದಯ ಶಾಲೆಯ ಪಕ್ಕ ಇಂದ್ರಾಣಿ ತೋಡಿನಲ್ಲಿ ಅಪರಿಚಿತ ಗಂಡಸಿನ ಕೊಳೆತ ಶವ ಗುರುವಾರ ಪತ್ತೆಯಾಗಿದೆ.
ಸ್ಥಳೀಯ ನಿವಾಸಿ ಸುನೀಲ್ ಬೈಲಕೆರೆ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಕರೆ ಮಾಡಿ ಮಾಹಿತಿ ತಿಳಿಸಿದರು.ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿದ ಒಳಕಾಡು ಅವರು ತೋಡಿನಲ್ಲಿ ಬಿದ್ದಿದ್ದ ಕೊಳೆತ ಶವವನ್ನು ಮೇಲಕ್ಕೆತ್ತಿದ್ದರು.
ನಗರ ಠಾಣೆಯ ಎ ಎಸ್ ಐ ನವೀನ್ ದೇವಾಡಿಗ, ಹೆಡ್ ಕಾನ್ಸಟೇಬಲ್ ತಾರಾನಾಥ್ ಕಾನೂನು ಪ್ರಕ್ರಿಯೆ ನಡೆಸಿದರು. ಉಮೇಶ ಬೈಲಕೆರೆ ಸಹಕರಿಸಿದರು ಕೊಳೆತ ಶವವನ್ನು ಅಜ್ಜರಕಾಡು ಶವಾಗಾರಕ್ಕೆ ಸಾಗಿಸಲು ಸಮಾಜ ಸೇವಕ ನಿತ್ಯಾನಂದ ಒಳಕಾಡು ಇಲಾಖೆಗೆ ನೆರವಾದರು.
ಸಂಭoಧಿಕರು ಯಾರಾದರೂ ಇದ್ದಲ್ಲಿ ಉಡುಪಿಯ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.