ಉಡುಪಿ: ಅತಿವೇಗವಾಗಿ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಡಿವೈಡರ್ ಏರಿ ಹಲವು ಪಲ್ಟಿಯಾಗಿ ಸ್ಕೂಟರಿನಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಡಿಕ್ಕಿಯಾಗಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಸಂಜೆ ಸಂಭವಿಸಿದೆ.
ಉಡುಪಿಯ ಕಡಿಯಾಳಿ ಓಕುಡೆ ಟವರ್ಸ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಮಣಿಪಾಲದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಕಾರು ಪಲ್ಟಿಯಾದ ಪರಿಣಾಮ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಹಲವು ವಾಹನಗಳು ಜಖಂಗೊಂಡಿವೆ