Share this news

 

ಉಡುಪಿ : ಕರಾವಳಿ ಜಂಕ್ಷನ್ ಬಳಿ ಒಂದುವರೆ ವರ್ಷದ ಹಿಂದೆ ನಡೆದಿದ್ದ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂದಿತ ಆರೋಪಿಗಳನ್ನು ಕೊಪ್ಪಳ ಜಿಲ್ಲೆ, ಕುಷ್ಟಗಿ ತಾಲೂಕಿನ ಕನಕಪ್ಪ ಹನುಮಂತ ರೋಡಿ(46) ಯಮನೂರ ತಿಪ್ಪಣ್ಣ ಮಾರಣಬಸರಿ (24) ಯಮನೂರಪ್ಪ ಜೇಡಿ (26) ಎಂದು ಗುರುತಿಸಲಾಗಿದೆ.

ಆರೋಪಿಗಳು 2023ರ ಅ. 17ರಂದು ಗುಜರಿ ಸಾಮಗ್ರಿ ಸಂಗ್ರಹಿಸುತ್ತಿದ್ದ ಕಿತ್ತೂರ ಸಿದ್ದಪ್ಪ ಶಿವನಪ್ಪ ಎಂಬಾತನ ಕೊಲೆ ಪ್ರಕರಣದ ಆರೋಪಿಗಳು. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಕರಣದ ವಿವರ : ಕಳೆದುಹೋದ ಬಟ್ಟೆ ವಿಚಾರದಲ್ಲಿ ಕಿತ್ತೂರು ಸಿದ್ದಪ್ಪ ಶಿವಪ್ಪನು ಆರೋಪಿ ಯಮನೂರ ತಿಪ್ಪಣ್ಣ ಮಾರಣಬಸರಿಯ ಸ್ನೇಹಿತ ಚಿನ್ನು ಪಾಟೇಲ್ ಹುಬ್ಬಳ್ಳಿ ಎಂಬಾತನಿಗೆ ರಾತ್ರಿ ಹಲ್ಲೆ ಮಾಡುತ್ತಿದ್ದ. ಇದನ್ನು ಪ್ರಶ್ನಿಸಲು ಹೋದ ಯಮನೂರ ತಿಪ್ಪಣ್ಣ ಮಾರಣ ಬಸರಿಗೂ ಹಲ್ಲೆ ಮಾಡಿದ ಈ ದ್ವೇಷದಿಂದ ಮರುದಿನ ಬೆಳಗ್ಗೆ ಮೂವರು ಸೇರಿ ಸಿದ್ದಪ್ಪನನ್ನು ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

ಬೆಂಗಳೂರು: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್​​ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಜನವರಿ 31ರಂದೇ ಈ ಸುತ್ತೋಲೆ ಹೊರಡಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ.

ಪ್ಲಾಸ್ಟಿಕ್‌ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್‌ ಬಾಟಲ್​ನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ. 

ಏಕ ಬಳಕೆಯ ಬಳಕೆಯ ಪ್ಲಾಸ್ಟಿಕ್‌ ಬಾಟಲ್ ನೀರಿನ ಬಳಕೆ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ 2024ರ ನವೆಂಬರ್​ನಲ್ಲಿಯೂ ಸುತ್ತೋಲೆ ಹೊರಡಿಸಲಾಗಿತ್ತು. ಆದಗ್ಯೂ ಸಹ ಸಚಿವಾಲಯವೂ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮವನ್ನು ಪಾಲಿಸದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ, ಇನ್ನು ಮುಂದೆ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಪ್ಲಾಸ್ಟಿಕ್‌ ಬಳಕೆಯ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಮತ್ತೊಮ್ಮೆ ಸೂಚನೆ ನೀಡಲಾಗುತ್ತಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *