Share this news

ಉಡುಪಿ: ಉಚ್ಚಿಲ ದಸರಾ -2025 ರ ಪ್ರಯುಕ್ತ ಅಕ್ಟೋಬರ್.2 ರಂದು ಬೃಹತ್ ಶೋಭಾಯತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಸಾಗಲಿರುವುದರಿಂದ ವಾಹನ ದಟ್ಟಣೆ ಉಂಟಾಗಿ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಆದ್ದರಿಂದ ಅಂದು ಉಡುಪಿ-ಮಂಗಳೂರು ಮಾರ್ಗವಾಗಿ ಬರುವ ಘನ ವಾಹನಗಳು ಸಂಜೆ 5 ಗಂಟೆಯಿAದ ರಾತ್ರಿ 9 ಗಂಟೆವರೆಗೆ ಬದಲಿ ಮಾರ್ಗವಾಗಿ ಕಟಪಾಡಿ-ಶಿರ್ವ-ಬೆಳ್ಮಣ್-ಪಡುಬಿದ್ರಿ ಮಾರ್ಗವಾಗಿ ಸಂಚರಿಸುವAತೆ ವಿನಂತಿಸಲಾಗಿದೆ.

ಉಡುಪಿ ಕಡೆಯಿಂದ ಬಜ್ಪೆ ಏರ್‌ಪೋರ್ಟ್ ಹೋಗುವ ವಾಹನಗಳು ಕಟಪಾಡಿ-ಶಿರ್ವ-ಬೆಳ್ಮಣ್-ಮುಂಡ್ಕೂರು ಮಾರ್ಗವಾಗಿ ಸಂಚರಿಸುವುದು. ಟ್ರಕ್, ಲಾರಿ, ಟ್ಯಾಂಕರ್ ಮುಂತಾದ ಘನ ವಾಹನಗಳನ್ನು ರಾತ್ರಿ 9 ಗಂಟೆಯವರೆಗೆ ಕುಂದಾಪುರ, ಉಡುಪಿ ಕಡೆಗಳಲ್ಲಿ ಟ್ರಕ್‌ಬೇಯಲ್ಲಿ ನಿಲ್ಲಿಸಿ ನಂತರ ಸಂಚಾರ ಮುಂದುವರಿಸಲಾಗುವುದು. ಉಡುಪಿ ಯಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರು ಸಂಚರಿಸುವ ರಾತ್ರಿ ಪ್ರಯಾಣಿಕ ಬಸ್ಸುಗಳು ರಾತ್ರಿ 9:00 ಗಂಟೆ ನಂತರ ಉಡುಪಿಯಿಂದ ಸಂಚರಿಸಬಹುದಾಗಿದೆ. ಮಂಗಳೂರು-ಉಡುಪಿ ಮಾರ್ಗವಾಗಿ ಸಾಗುವ ಘನ ವಾಹನಗಳು ಸಂಜೆ 5:00 ರಿಂದ ರಾತ್ರಿ 10:00 ಗಂಟೆ ಮಧ್ಯೆ ಸಂಚರಿಸದೆ ದಸರಾ ಶೋಭಾಯಾತ್ರೆ ಸಾಗಲು ಸಹಕರಿಸಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *