
ಉಡುಪಿ, ಮಾ.10: ಮದ್ಯದ ಅಮಲಿನಲ್ಲಿ ನಡೆದ ಗಲಾಟೆಯಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದ ಘಟನೆ ಉಡುಪಿ ತಾಲೂಕಿನ ಮಣಿಪುರ ಗ್ರಾಮದ ಕೆನರಾಡಿಯಲ್ಲಿ ಮಾ 9ರಂದು ನಡೆದಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಣಿಪುರ ಗ್ರಾಮದ ಅರಬಿ ಕೆನರಾಡಿ ನಿವಾಸಿ ವನಜಾ ಪೂಜಾರ್ತಿ (60) ಕೊಲೆಯಾದ ದುರ್ದೈವಿ. ವಲೇರಿಯನ್ ಮೆಂಡೋನ್ಸಾ ಹಾಗೂ ಪ್ರವೀಣ್ ಮೆಂಡೋನ್ಸಾ ಬಂಧಿತ ಕೊಲೆ ಆರೋಪಿಗಳು. ಹತ್ಯೆಗೀಡಾದ ವನಜಾ ಪೂಜಾರ್ತಿ ಅವರ ಜೊತೆ ಆರೋಪಿಗಳು ನಿತ್ಯ ಮದ್ಯ ಸೇವನೆ ಮಾಡುತ್ತಿದ್ದರು ಎನ್ನಲಾಗಿದ್ದು, ಮಾರ್ಚ್ 9ರಂದು ಸಂಜೆಯಿAದ ತಡರಾತ್ರಿವರೆಗೂ ಎಂದಿನAತೆ ಮದ್ಯ ಸೇವಿಸುತ್ತಿದ್ದಾಗ ಇವರ ನಡುವೆ ಯಾವುದೋ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಕುಡಿದ ಅಮಲಿನಲ್ಲಿ ಗಲಾಟೆ ವಿಕೋಪಕ್ಕೆ ಹೋಗಿದ್ದು, ಈ ವೇಳೆ ಆರೋಪಿಗಳು ಹರಿತವಾದ ಆಯುಧದಿಂದ ವನಜಾ ಅವರ ಮೇಲೆ ದಾಳಿ ನಡೆಸಿ ಕೊಲೆ ಮಾಡಿದ್ದಾರೆ.
ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


.
.
.
.
.
.
.
.
.
.
