

ಬೆಂಗಳೂರು,ನ.02: ರಾಜ್ಯ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳನ್ನು ಗುರಿಯಾಗಿಸಿಕೊಂಡು ಸೈಬರ್ ವಂಚಕರು ಸಾರ್ವಜನಿಕರಿಂದ ಒಟಿಪಿ ಮತ್ತು ಬ್ಯಾಂಕ್ ವಿವರಗಳನ್ನು ಕದಿಯುತ್ತಿರುವ ಹಿನ್ನೆಲೆಯಲ್ಲಿ, ಯಾವುದೇ ಕಾರಣಕ್ಕೂ ಇಂತಹ ವೈಯಕ್ತಿಕ ಮಾಹಿತಿಗಳನ್ನು ಅಪರಿಚಿತರೊಂದಿಗೆ ಹಂಚಿಕೊಳ್ಳದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹತ್ವದ ಜಾಗೃತಿ ಸೂಚನೆ ನೀಡಿದೆ. ಗೃಹಲಕ್ಷ್ಮಿ ಯೋಜನೆಯ 2,000 ಹಣ ಪಡೆಯುತ್ತಿರುವ ಮಹಿಳೆಯರು ವಂಚನೆಗೆ ಒಳಗಾಗದಂತೆ ಎಚ್ಚರಿಕೆ ವಹಿಸಲು ಇಲಾಖೆಯು ಸೂಚಿಸಿದೆ.
ಹಲವು ಕಡೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಅರ್ಜಿಗಳ ಮರುಪರಿಶೀಲನೆ ಅಥವಾ ಸಮೀಕ್ಷೆ ನಡೆಸುವ ನೆಪದಲ್ಲಿ ಮನೆಗೆ ಬರುವ ಅಥವಾ ಮೊಬೈಲ್ ಮೂಲಕ ಸಂಪರ್ಕಿಸುವ ಅಪರಿಚಿತ ವ್ಯಕ್ತಿಗಳು ಒಟಿಪಿ ಮತ್ತು ಬ್ಯಾಂಕ್ ಖಾತೆಯ ವಿವರಗಳನ್ನು ಕೇಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಬ್ಯಾಂಕ್ ಖಾತೆ ಸಂಖ್ಯೆ, ಆಧಾರ್ ಕಾರ್ಡ್ ವಿವರ, ಮೊಬೈಲ್ಗೆ ಬರುವ ಒಟಿಪಿ ಅಥವಾ ಯಾವುದೇ ಇತರೆ ಹಣಕಾಸಿನ ಸೂಕ್ಷ್ಮ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಇಲಾಖೆಯ ನಿಯಮಾವಳಿಗಳ ಪ್ರಕಾರ ಭವಿಷ್ಯದಲ್ಲಿ ಅರ್ಜಿಗಳ ಮರುಪರಿಶೀಲನೆ ಪ್ರಕ್ರಿಯೆಗೆ ಆಧಾರ್ ಲಿಂಕ್ ಆದ ಮೊಬೈಲ್ ಸಂಖ್ಯೆ ಹಾಗೂ ಒಟಿಪಿ ದೃಢೀಕರಣ ಅಗತ್ಯವಿರಲಿದೆಯಾದರೂ, ಸದ್ಯಕ್ಕೆ ಇಲಾಖೆಯಿಂದ ಯಾವುದೇ ರೀತಿಯ ಅಧಿಕೃತ ಮರುಪರಿಶೀಲನಾ ಪ್ರಕ್ರಿಯೆ ಅಥವಾ ಸಮೀಕ್ಷೆಗಳು ಪ್ರಾರಂಭವಾಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
