ಮಂಡ್ಯ : ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಗಲಾಟೆ ನಡೆದ ನಾಗಮಂಗಲಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಾಗಮಂಗಲ ಪಟ್ಟಣಕ್ಕೆ ಭೇಟಿ ನೀಡಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ನಿನ್ನೆ ಗಲಭೆ ನಡೆದಿದ್ದ ಸ್ಥಳದಲ್ಲ ಪರಿಶೀಲನೆ ನಡೆಸಿದ್ದಾರೆ. ಸುಟ್ಟು ಹೋಗಿರುವ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ ಎಂದು ಹೇಳಿದ್ದಾರೆ.
ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ ಎಂದು ಹೇಳಿದ್ದಾರೆ.
in