ಉಪ್ಪಿನಂಗಡಿ: ನೆಲ್ಯಾಡಿ ಗ್ರಾಮದ ಮಾದೇರಿ ಎಂಬಲ್ಲಿ ಶುಕ್ರವಾರ ಶರತ್ ಕುಮಾರ್ ಎಂಬ ಯುವಕನನ್ನು ಚಾಕುವಿನಿಂದ ಇರಿದು ಕೊಲೆಗೈದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹರಿಪ್ರಸಾದ್ ಎಂದು ಗುರುತಿಸಲಾಗಿದೆ.
ಕ್ಷುಲ್ಲಕ ವಿಚಾರಕ್ಕೆಸಂಬಂಧಿಸಿ ಚಿಕ್ಕಪ್ಪನ ಮನೆಮಂದಿಯೊAದಿಗೆ ಜಗಳವಾಡುತ್ತಿದ್ದ ಶರತ್ ಕುಮಾರ್‌ನನ್ನು ಆತನ ಚಿಕ್ಕಪ್ಪನ ಮನೆಯಂಗಳದಲ್ಲಿಯೇ ಚಾಕುವಿನಿಂದ ಇರಿದು ಕೊಲ್ಲಲಾಗಿತ್ತು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪೆರಿಯಶಾಂತಿಯಲ್ಲಿದ್ದ ಆರೋಪಿ ಹರಿಪ್ರಸಾದ್‌ನನ್ನು ಬಂಧಿಸಿದ್ದಾರೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.