ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ನ್ಯಾಯಾಧೀಶರ ನಿವಾಸಕ್ಕೆ ಕರೆತಂದಿದ್ದಾರೆ. ಈ ವೇಳೆ ನ್ಯಾಯಾಧೀಶರು ಜುಲೈ 18 ರವರೆಗೆ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.
ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿರುವ ನ್ಯಾಯಾಧೀಶರ ನಿವಾಸದಲ್ಲಿ ನಿನ್ನೆ (ಶುಕ್ರವಾರ) ಬೆಳ್ಳಂಬೆಳಗ್ಗೆ ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ವಶಕ್ಕೆ ಪಡೆದಿದ್ದರು.
40 ಗಂಟೆ ತಪಾಸಣೆ ಬಳಿಕ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನ ಇಡಿ ವಶಕ್ಕೆ ಪಡೆದಿದೆ. ರೇಡ್ ವೇಳೆ ಸರಿಯಾದ ಉತ್ತರ ನೀಡದ ಹಿನ್ನಲೆಯಲ್ಲಿ ನಾಗೇಂದ್ರ ಅವರನ್ನ ಇಡಿ ಅಧಿಕಾರಿಗಳು ವಶಕ್ಕೆ ಪಡೆದು ಕರೆದೊಯ್ದಿದ್ದರು. ಬಳಿಕ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಕರೆತಂದಿದ್ದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರ ಗಜಾನನ ಭಟ್ ಅವರು ನಾಗೇಂದ್ರ ಅವರನ್ನು ಜುಲೈ 18 ರ ವರೆಗೆ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.