Share this news

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್‌ ಪತನವಾಗಿದ್ದು, ಸಚಿವ ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಇಂದು ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಬಳಿಕ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ವರ್ಗಾವಣೆ ಪ್ರಕರಣ ಸಂಬಂಧ ಅವರು ರಾಜೀನಾಮೆ ನೀಡಿದ್ದಾರೆ.

ಏನಿದು ಪ್ರಕರಣ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ವರ್ಗಾವಣೆ ಪ್ರಕರಣದ ತನಿಖೆ ಸಂಬಂಧ ಬ್ಯಾಂಕ್‌ ಆಫ್‌ ಇಂಡಿಯಾದ ಮೂವರು ಉದ್ಯೋಗಿಗಳು ಹಾಗೂ ಇಬ್ಬರು ಖಾಸಗಿ ವ್ಯಕ್ತಿಗಳ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲಿಸಿಕೊಂಡಿದೆ. ಇನ್ನೊಂದೆಡೆ ಕ್ಷಿಪ್ರ ತನಿಖೆ ಮುಂದುವರಿಸಿರುವ ಎಸ್‌ಐಟಿ ಅಧಿಕಾರಿಗಳು ಸಚಿವ ನಾಗೇಂದ್ರ ಆಪ್ತರು ಎನ್ನಲಾದ ನಾಗರಾಜು ನೆಕ್ಕಂಟಿ ಹಾಗೂ ನಾಗೇಶ್ವರ್‌ ರಾವ್‌ ಎಂಬುವವರನ್ನು ಬಂಧಿಸಿದ್ದು,ಈ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ತಲೆದಂಡವಾಗಿದೆ ಎನ್ನಲಾಗಿ

 

 

                        

                          

 

 

 

 

 

                        

                          

 

Leave a Reply

Your email address will not be published. Required fields are marked *