ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ತರ ಬೆಳವಣಿಗೆ ನಡೆದಿದ್ದು, ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾನನ್ನು ಆಗಸ್ಟ್ 13ರಂದು ಇ.ಡಿ ಕಸ್ಟಡಿಗೆ ನೀಡುವಂತೆ ಹೈಕೋರ್ಟ್ ಆದೇಶಿಸಿದೆ.
ವಾಲ್ಮೀಕಿ ನಿಗಮ ಹಗರಣದಲ್ಲಿ ಹೈದರಾಬಾದ್ ಮೂಲದ ಆರೋಪಿ ಸತ್ಯನಾರಾಯಣ ವರ್ಮಾ ನನ್ನು ಕಸ್ಟಡಿಗೆ ಕೋರಿ ಜಾರಿ ನಿರ್ದೇಶನಾಲಯವು ಇತ್ತೀಚಿಗೆ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿತ್ತು. ಇಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆಗಸ್ಟ್ 13ರಂದು ಇ.ಡಿ ಕಸ್ಟಡಿಗೆ ನೀಡುವಂತೆ ಹೈಕೋರ್ಟ್ಗೆ ಆದೇಶ ಹೊರಡಿಸಿದೆ.
ಸತ್ಯನಾರಾಯಣ ವರ್ಮಾನನ್ನು ED ಕಸ್ಟಡಿಗೆ ನೀಡುವಂತೆ ಸೆಷನ್ಸ್ ಕೋರ್ಟ್ ಆದೇಶವಿದ್ದರೂ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಹೀಗಾಗಿ ಪೊಲೀಸರ ಕ್ರಮಕ್ಕೆ ಇ.ಡಿ ಪರ ಎಸ್‌ಪಿಪಿ ಪ್ರಸನ್ನಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು. ಇದೀಗ ಆಗಸ್ಟ್ 12ಕ್ಕೆ ಪೊಲೀಸ್ ಕಸ್ಟಡಿ ಮುಕ್ತಾಯಗೊಳ್ಳಲಿದ್ದು, ಆಗಸ್ಟ್ 13 ರಂದು ಜಾರಿ ನಿರ್ದೇಶನಾಲಯ ಕಸ್ಟಡಿಗೆ ನೀಡುವಂತೆ ಆದೇಶಿಸಲಾಗಿದೆ.