ಮೈಸೂರು : ಹಿರಿಯ ಕನ್ನಡ ಸಾಹಿತಿ, ಪದ್ಮಭೂಷಣ ಪುರಸ್ಕೃತರಾದ ಎಸ್.ಎಲ್. ಭೈರಪ್ಪ ಅವರು ಸೆಪ್ಟೆಂಬರ್ 24, 2025ರಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಚಾಮುಂಡಿ ಬೆಟ್ಟದ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.ಲಂಡನ್ನಿಂದ ಆಗಮಿಸಿದ್ದ ಅವರ ಪುತ್ರ ರವಿಶಂಕರ್ ತಂದೆಯ ಅಂತ್ಯಕ್ರಿಯೆ ನೆರವೇರಿಸಿದರು. ಈ ಮೂಲಕ ಪಂಚಭೂತಗಳಲ್ಲಿ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಲೀನರಾಗಿದ್ದಾರೆ.
ಈ ಸಂದರ್ಭದಲ್ಲಿ ಎಸ್.ಎಸ್ ಭೈರಪ್ಪನವರ ಕುಟುಂಬಸ್ಥರು. ಸ್ನೇಹಿತರು ಸೇರಿದಂತೆ ಹಲವು ರಾಜಕೀಯ ಗಣ್ಯರು ನೆರೆದಿದ್ದರು. ಅಗಲಿದ ಸಾಹಿತಿಗೆ ಪೊಲೀಸರು 3 ಸುತ್ತು ಕುಶಾಲ ತೋಪು ಸಿಡಿಸಿ ಗೌರವ ಸಲ್ಲಿಸಿದರು.ಓರ್ವ ಧೀಮಂತ ಸಾಹಿತಿ, ಸಂಶೋಧಕರನ್ನು ಭಾರತ ಕಳೆದುಕೊಂಡಂತಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶೋಕ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಪ್ರಸಿದ್ಧ ಲೇಖಕ, ಪದ್ಮವಿಭೂಷಣ, ಪದ್ಮಶ್ರೀ ಡಾ.ಎಸ್.ಎಲ್.ಭೈರಪ್ಪ ಅವರ ಅಂತ್ಯಕ್ರಿಯೆಯಲ್ಲಿ ಕೇಂದ್ರದ ಪ್ರತಿನಿಧಿಯಾಗಿ ಭಾಗಿಯಾಗಲು ಭೈರಪ್ಪ ಅವರ ಒಡನಾಡಿ, ಕೇಂದ್ರ ಸಂಪುಟದ ಹಿರಿಯ ಸಚಿವ ಪ್ರಲ್ಹಾದ್ ಜೋಶಿ ಅನ್ನು ನೇಮಿಸಲಾಗಿತ್ತು.
ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪನವರ ಸ್ಮಾರಕ ನಿರ್ಮಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ನಿನ್ನೆ ಎಸ್.ಎಲ್ ಭೈರಪ್ಪನವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಎಸ್.ಎಲ್.ಬೈರಪ್ಪ ಅವರು ತಮ್ಮ ಬಹುಪಾಲು ಬದುಕನ್ನು ಮೈಸೂರಿನಲ್ಲಿ ಕಳೆದಿದ್ದರು. ಈ ಕಾರಣದಿಂದಾಗಿ ಮೈಸೂರಿನಲ್ಲಿಯೇ ಅವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.
ಗುರುವಾರದಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಬಳಿಕ ರವೀಂದ್ರ ಕಲಾಕ್ಷೇತ್ರದ ಬಳಿಕ ಮೈಸೂರಿಗೆ ಪಾರ್ಥಿವ ಶರೀರ ಸ್ಥಳಾಂತರಿಸಲಾಗಿತ್ತು. ಇಂದು ಮೈಸೂರಿನ ಕಲಾಮಂದಿರದಲ್ಲೂ ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು.