

ಮೂಡುಬಿದಿರೆ, ಆ,15: ಖಾಸಗಿ ಬಸ್ಸಿನಲ್ಲಿ ಅನ್ಯಕೋಮಿನ ವಯೋವೃದ್ಧನೋರ್ವ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಬೆಳುವಾಯಿ ಗ್ರಾಮದ ಕರಿಯನಂಗಡಿ ಕುಕ್ಕಡೇಲು ನಿವಾಸಿ ರೆಹಮಾನ್ (60) ಎಂಬಾತನೇ ಲೈಂಗಿಕ ಕಿರುಕುಳ ನೀಡಿದ ಆರೋಪಿ ಎಂದು ತಿಳಿದುಬಂದಿದೆ.
ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ಓರ್ವ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಎಲ್ಲೆಡೆ ಕಾಮುಕನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಆದರೆ ವಿಡಿಯೋದಲ್ಲಿ ಯುವತಿಯ ಮುಖ ಚಹರೆ ಸರಿಯಾಗಿ ಕಂಡು ಬರದ ಕಾರಣ ಪೊಲೀಸರಿಗೆ ಗುರುತಿಸಲು ಅಸಾಧ್ಯವಾಗಿಲ್ಲ.ಅಲ್ಲದೇ ಈಗಾಗಲೇ ಆರೋಪಿಯನ್ನು ಠಾಣೆಗೆ ಕರೆಯಿಸಿ ವಿಚಾರಿಸಲಾಗಿದ್ದು ಆತನಿಗೂ ಸಹ ಸಂತ್ರಸ್ತ ಯುವತಿಯ ಬಗ್ಗೆ ಮಾಹಿತಿ ಇರುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಸಂತ್ರಸ್ತ ಯುವತಿ ಅಥವಾ ಘಟನೆಯ ಕುರಿತು ವಿಡಿಯೋ ಚಿತ್ರೀಕರಣ ಮಾಡಿರುವ ವ್ಯಕ್ತಿಗಳು ನೇರವಾಗಿ ಪೊಲೀಸ್ ಠಾಣೆಗೆ ಅಗಮಿಸಿ ದೂರು ನೀಡದರೆ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೂಡಬಿದಿರೆ ಪೊಲೀಸ್ ನೀರಿಕ್ಷಕ ಸಂದೇಶ್ ಪಿ.ಜಿ ತಿಳಿಸಿದ್ದಾರೆ.














