ಕಾರ್ಕಳ: ಉಡುಪಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ವಿಜಯಾ ಅವರು ಕಾರ್ಕಳ ತಾಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಬುಧವಾರ ಅಧಿಕಾರ ಸ್ವೀಕರಿಸಿದರು.
ಈ ಹಿಂದಿನ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಗುರುದತ್ತ್ ಎಂ.ಎನ್ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ವಿಜಯಾ ಅವರನ್ನು ಕಾರ್ಕಳಕ್ಕೆ ಹೆಚ್ಚುವರಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಆದೇಶಿಸಿದ್ದಾರೆ.
ವಿಜಯಾ ಅವರನ್ನು ಕಾರ್ಕಳ ತಾಲೂಕು ಪಂಚಾಯಿತಿ ಸಿಬ್ಬಂದಿಗಳು ಹೂಗುಚ್ಚ ನೀಡಿ ಸ್ವಾಗತಿಸಿದರು
`