Share this news

ಕಾರ್ಕಳ, ಪೆ.24: ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಅನುದಾನ ಮಂಜೂರಾಗಿ ನಿರ್ಮಾಣಗೊಂಡು ಉದ್ಘಾಟನೆಗೆ ಸಿದ್ಧಗೊಂಡಿರುವ ಕಾರ್ಕಳದ ಅಂಬೇಡ್ಕರ್ ಭವನದ ಉದ್ಘಾಟನೆಯಲ್ಲಿ ಜಿಲ್ಲಾಡಳಿತ ಶಿಷ್ಟಾಚಾರ ಉಲ್ಲಂಘಿಸಿದೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಆರೋಪಿಸಿದ್ದಾರೆ.

ಉದ್ಘಾಟನಾ ಸಮಾರಂಭದ ವೇದಿಕೆಯ ಬ್ಯಾನರ್ ನಲ್ಲಿ ಕೇವಲ ಕಾಂಗ್ರೆಸ್ ನಾಯಕರ ಭಾವಚಿತ್ರಗಳನ್ನು ಹಾಕುವ ಮೂಲಕ ಸರ್ಕಾರಿ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಡಳಿತ ರಾಜಕೀಯ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಅಂಬೇಡ್ಕರ್ ಭವನದ ಉದ್ಘಾಟನೆಯನ್ನು ಕಾಂಗ್ರೆಸ್ ಪಕ್ಷದ ಕಾರ್ಯವನ್ನಾಗಿಸಲು ಮುಂದಾಗಿರುವುದು ಸರಿಯಲ್ಲ.
ಅಂಬೇಡ್ಕರ್ ಭವನಕ್ಕೆ ಸಮಾಜಕಲ್ಯಾಣ ಇಲಾಖೆಯ ಮಾಜಿ ಸಚಿವರಾಗಿದ್ದ ಹಾಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಸಹಕಾರದೊಂದಿಗೆ, ಕಾರ್ಕಳದ ಶಾಸಕ ಸುನಿಲ್ ಕುಮಾರ್ ಅವರ ವಿಶೇಷ ಮುತುವರ್ಜಿಯಿಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ 6 ಕೋಟಿ ಅನುದಾನ ಬಿಡುಗಡೆಯಾಗಿತ್ತು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸಚಿವರಾಗಿದ್ದ ಸುನೀಲ್ ಕುಮಾರ್ ಅವರ ಒತ್ತಾಸೆಯಿಂದ ಕಾರ್ಕಳದಲ್ಲಿ 6 ಕೋಟಿ‌ ರೂ. ವೆಚ್ಚದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭವನ ಸ್ಥಾಪನೆಗೆ ಶಂಕು ಸ್ಥಾಪನೆ ಮಾಡಲಾಗಿತ್ತು.ಇದೀಗ ಈ ಕಟ್ಟಡವು ಉದ್ಘಾಟನೆಗೊಳ್ಳುವುದು ಸ್ವಾಗತಾರ್ಹ.
ಆದರೆ ಈ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗುತ್ತಿದೆ. ಸ್ಥಳೀಯ ಶಾಸಕರು ಹಾಗೂ ಸಂಸದರ ಭಾವಚಿತ್ರ ಹಾಕದೇ ಸಿಎಂ,ಡಿಸಿಎಂ ಹಾಗೂ ಉಸ್ತುವಾರಿ ಸಚಿವರ ಭಾವಚಿತ್ರವನ್ನು ಮಾತ್ರ ಹಾಕಲಾಗಿದೆ. ಇದನ್ನು ಖಂಡಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *