ಬೆಳಗಾವಿ: ಬೆಳಗಾವಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಹಿಂಸಾಚಾರ ನಡೆದಿದೆ. ದುಷ್ಕರ್ಮಿಗಳು ಮೂವರು ವಿದ್ಯಾರ್ಥಿಗಳ ಮೇಲೆ ಅಟ್ಯಾಕ್ ಮಾಡಿದ್ದು ಚಾಕುವಿನಿಂದ ಇರಿದಿದ್ದಾರೆ. ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುವಾಗ ಕಾಲು ತಾಕಿದಕ್ಕೆ ಈ ಘಟನೆ ನಡೆದಿದೆ. ಸದ್ಯ ಪೊಲೀಸರು ಚೇಸ್ ಮಾಡಿ ಪರಾರಿಯಾಗುತ್ತಿದ್ದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸಮಾಜ ಕಲ್ಯಾಣ ವಸತಿ ನಿಲಯದ ಮೂವರು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು ಹೊಟ್ಟೆ, ಕತ್ತು, ಬೆನ್ನಿನ ಭಾಗಕ್ಕೆ ಚಾಕುವಿನಿಂದ ಇರಿಯಲಾಗಿದೆ. ಬೆಳಗಾವಿಯ ಚರ್ಚ್ ಗಲ್ಲಿಯ ಯುವಕರ ಗ್ಯಾಂಗ್ನಿಂದ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಪ್ರವೀಣ್ ಗುಂಡ್ಯಾಗೋಳ್ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಾಗೂ ದರ್ಶನ್ ಪಾಟೀಲ್, ಸತೀಶ್ ಪೂಜಾರಿಗೆ ಬಿಮ್ಸ್ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
in