ಶಿರಸಿ:ಬರೋಬ್ಬರಿ 500 ವರ್ಷಗಳ ಬಳಿಕ ಲಕ್ಷಾಂತರ ಕರ ಸೇವಕರ ಬಲಿದಾನದ ಫಲವಾಗಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಿದೆ. ಆದರೆ ರಾಮ ಮಂದಿರದ ಲೋಕಾರ್ಪಣೆ ಗೆ ಆಹ್ವಾನವನ್ನು ತಿರಸ್ಕರಿಸಿದವರನ್ನು ಲೋಕಸಭಾ ಚುನಾವಣೆಯಲ್ಲಿ ಜನರು ತಿರಸ್ಕರಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.
ಅವರು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ, “ರಾಮ ಮಂದಿರವನ್ನು ನಿರ್ಮಿಸಬಾರದು ಎಂದು ಕಾಂಗ್ರೆಸ್ ಮತ್ತು ಅದರ ಸಹವರ್ತಿಗಳು 70 ವರ್ಷಗಳಿಂದ ಪ್ರಯತ್ನಿಸುತ್ತಲೇ ಇದ್ದರು. ಆದರೆ ದೇಶಕ್ಕೆ ಸ್ವಾತಂತ್ರ್ಯ ಬಂದ ಮರುದಿನವೇ ಅಂದಿನ ಸರ್ಕಾರ ರಾಮ ಮಂದಿರ ನಿರ್ಮಾಣದ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕಿತ್ತು ಎಂದು ಮೋದಿ ಹೇಳಿದರು.
ಈ ವಿಷಯದ ಬಗ್ಗೆ ಕಾಂಗ್ರೆಸ್ ಗುರಿಯಾಗಿಸಿಕೊಂಡ ಅವರು, ರಾಮ ಮಂದಿರವನ್ನು ನಿರ್ಮಿಸದಂತೆ ನೋಡಿಕೊಳ್ಳಲು ರಾಮ ವಿರೋಧಿ ಶಕ್ತಿಗಳು ಕೊನೆಯ ಕ್ಷಣದವರೆಗೂ ಪ್ರಯತ್ನಿಸಿದವು ಮತ್ತು ಕೊನೆಯ ದಿನವೂ ನ್ಯಾಯಾಲಯದಲ್ಲಿ ತಡೆಯಾಜ್ಞೆ ತರಲು ಯತ್ನಿಸಿದ್ದರು,ಇಂತಹ ಮನಸ್ಥಿತಿಯವರನ್ನು ದೇಶದ ಮತದಾರರು ಈ ಬಾರಿ ತಿರಸ್ಕರಿಸಲಿದ್ದಾರೆ ಎಂದರು.