Share this news

ಬೆಂಗಳೂರು,ನ.20: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯ 7 ಅಭಿವೃದ್ಧಿ ನಿಗಮಗಳಲ್ಲಿ 2013-14ರಿಂದ 2020-21ರವರೆಗೆ ನಾನಾ ಯೋಜನೆಗಳಡಿ ಸಾಲ ಪಡೆದಿರುವ ಫಲಾನುಭವಿಗಳು ಅಸಲನ್ನು ಪೂರ್ಣವಾಗಿ ಪಾವತಿಸಿದರೆ ಒಂದು ಬಾರಿಗೆ ಅನ್ವಯಿಸುವಂತೆ ಬಡ್ಡಿ ಮನ್ನಾ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 7 ನಿಗಮಗಳಿಂದ 2012-13ರಿಂದ 2020-21ರವರೆಗೆ ವಿತರಿಸಲಾದ ಸಾಲದ ಅಸಲನ್ನು ಪೂರ್ಣವಾಗಿ ಮರುಪಾವತಿಸುವ ಸುಮಾರು 2.83 ಲಕ್ಷ ಫಲಾನುಭವಿಗಳಿಗೆ ಒಟ್ಟು 236.04 ಕೋಟಿ ರೂ ಬಡ್ಡಿ ಮನ್ನಾ ಮಾಡಲು ‘ಒಂದಾವರ್ತಿ ತೀರುವಳಿ’ ಯೋಜನೆಗೆ ಸಂಪುಟ ಒಪ್ಪಿಗೆ ನೀಡಿದೆ. ಈ ಸೌಲಭ್ಯವನ್ನು 6 ತಿಂಗಳೊಳಗೆ ಪಡೆದುಕೊಳ್ಳಬೇಕು.

ರಾಜ್ಯದಲ್ಲಿ ಒಂದು ಲಕ್ಷ ಮನೆಗಳ ನಿರ್ಮಾಣ ಯೋಜನೆಯಡಿ SC/ST ಫಲಾನುಭವಿಗಳ ಸಹಾಯಧನವನ್ನು 2 ಲಕ್ಷದಿಂದ 3 ಲಕ್ಷಕ್ಕೆ ಹೆಚ್ಚಿಸಲಾಗಿದೆ (ಸಾಮಾನ್ಯ ವರ್ಗದವರಿಗೆ 1.20 ಲಕ್ಷದಿಂದ 2 ಲಕ್ಷಕ್ಕೆ ಏರಿಕೆ). ರೈತರ ಆದಾಯ ಹೆಚ್ಚಿಸುವ ದೃಷ್ಟಿಯಿಂದ ‘ಮುಖ್ಯಮಂತ್ರಿ ಕೃಷಿ ವಿಸ್ತಾರ’ ಯೋಜನೆಯನ್ನು ಮುಂದಿನ 3 ವರ್ಷಗಳಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಸಂಪುಟ ಸಭೆ ತೀರ್ಮಾನಿಸಿತು. ಇದರಡಿ ಕೃಷಿ, ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ, ಉಪ ಉತ್ಪನ್ನಗಳ ತಯಾರಿಕೆ, ಪರ್ಯಾಯ ಕೃಷಿ ಉದ್ಯಮಗಳ ಸ್ಥಾಪನೆ, ಕೃಷಿ ತ್ಯಾಜ್ಯಗಳ ಸದ್ಬಳಕೆಗೆ ಉತ್ತೇಜನ ನೀಡಲಾಗುತ್ತದೆ. ಈ ಉದ್ದೇಶಕ್ಕೆ ರೈತರು, ಸ್ವಸಹಾಯ ಸಂಘಗಳು, ರೈತ ಗುಂಪುಗಳು ಮತ್ತು ರೈತ ಉತ್ಪಾದಕ ಸಂಸ್ಥೆಗಳಿಗೆ ಘಟಕ ಸ್ಥಾಪಿಸಲು ಸಹಾಯಧನ ಒದಗಿಸಲಾಗುತ್ತದೆ. ರಾಜ್ಯದ 69 ಸಾವಿರ ಅಂಗನವಾಡಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1.39 ಲಕ್ಷಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಸಮವಸ್ತ್ರ ವಿತರಿಸಲು ಸಂಪುಟ ಒಪ್ಪಿಗೆ ನೀಡಿದೆ.

2027ನೇ ಕ್ಯಾಲೆಂಡರ್ ವರ್ಷದ ಸಾರ್ವತ್ರಿಕ ರಜಾದಿನಗಳ ಪಟ್ಟಿಗೆ ಸಚಿವ ಸಂಪುಟ ಸಭೆಯಲ್ಲಿ ಅಂಗೀಕಾರ ದೊರೆತಿದೆ. ಎರಡನೇ ಶನಿವಾರ, ನಾಲ್ಕನೇ ಶನಿವಾರ ಹಾಗೂ ಭಾನುವಾರಗಳನ್ನು ಹೊರತುಪಡಿಸಿ 2027ನೇ ಸಾಲಿನಲ್ಲಿ ಒಟ್ಟು 18 ಸಾರ್ವತ್ರಿಕ ರಜಾದಿನಗಳನ್ನು ಘೋಷಿಸಲಾಗಿದೆ. ಇದರ ಜೊತೆಗೆ, ಎರಡನೇ ಶನಿವಾರ, ನಾಲ್ಕನೇ ಶನಿವಾರ, ಭಾನುವಾರ ಹಾಗೂ ಸಾರ್ವತ್ರಿಕ ರಜಾದಿನಗಳನ್ನು ಹೊರತುಪಡಿಸಿ ಒಟ್ಟು 19 ಪರಿಮಿತ ರಜಾದಿನಗಳನ್ನು ಪಟ್ಟಿಯಲ್ಲಿ ಸೇರಿಸಲಾಗಿದೆ.

 

 

.

 

.

.

.

 

 

 

 

 

 

 

 

 

 

 

 

 

.

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *