ಹೆಬ್ರಿ: ಬೈಕಿಗೆ ಪಿಕಪ್ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಹೆಬ್ರಿ ತಾಲೂಕಿನ ವರಂಗದಲ್ಲಿ ಜ.7 ರಂದು ನಡೆದಿದೆ.
ಕಾರ್ಕಳ-ಹೆಬ್ರಿ ಮುಖ್ಯರಸ್ತೆಯಲ್ಲಿ ಹೆಬ್ರಿ ಕಡೆಯಿಂದ ಅಜೆಕಾರು ಕಡೆಗೆ ಬರುತ್ತಿದ್ದ ಪಿಕಪ್ ವಾಹನ ಅಜೆಕಾರು ಕಡೆಯಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಅತಿ ವೇಗವಾಗಿ ಬರುತ್ತಿದ್ದ ಪಿಕಪ್ ರಸ್ತೆಯ ತೀರಾ ಬಲಬದಿಗೆ ಬಂದು ಬೈಕಿಗೆ ಡಿಕ್ಕಿಯಾಗಿದ್ದು, ಅಪಘಾತದಿಂದ ಬೈಕ್ ಸವಾರ ಸುನೀಲ್ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.